Genesis 6:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನಾನು ನಿನಗೆ ಹೇಳುತ್ತಿರುವುದನ್ನು ಅರ್ಥಮಾಡಿಕೊ. ನಾನು ಭೂಮಿಯ ಮೇಲೆ ಮಹಾ ಜಲಪ್ರಳಯವನ್ನು ತರುವೆನು. ಆಕಾಶದ ಕೆಳಗಿರುವ ಎಲ್ಲಾ ಜೀವಿಗಳನ್ನು ನಾಶಮಾಡುವೆನು. ಭೂಮಿಯ ಮೇಲಿರುವ ಪ್ರತಿಯೊಂದೂ ಸಾಯುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನಂತೂ ಭೂಮಿಯ ಮೇಲೆ ಜಲಪ್ರಳಯವನ್ನು ಬರಮಾಡಿ ಆಕಾಶದ ಕೆಳಗಿರುವ ಸಕಲಪ್ರಾಣಿಗಳನ್ನೂ ನಾಶಮಾಡುವೆನು; ಭೂಮಿಯಲ್ಲಿರುವ ಸಮಸ್ತವೂ ಲಯವಾಗುವುದು.
Kannada BSI Bible 2016
ಇಗೋ, ನಾನು ನಾನಾಗಿಯೇ ಆಕಾಶದ ಕೆಳಗೆ ಜೀವಶ್ವಾಸವಿರುವವುಗಳನ್ನೆಲ್ಲಾ ನಾಶ ಮಾಡುವದಕ್ಕೆ ಜಲಪ್ರಳಯವನ್ನು ಭೂಮಿಯ ಮೇಲೆ ಬರಮಾಡುತ್ತೇನೆ; ಆಗ ಭೂಮಿಯಲ್ಲಿರುವದೆಲ್ಲಾ ಸತ್ತುಹೋಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನಂತೂ ಭೂವಿುಯ ಮೇಲೆ ಜಲಪ್ರಳಯವನ್ನು ಬರಮಾಡಿ ಆಕಾಶದ ಕೆಳಗಿರುವ ಸಕಲ ಪ್ರಾಣಿಗಳನ್ನೂ ಅಳಿಸಿಬಿಡುವೆನು; ಭೂವಿುಯಲ್ಲಿರುವ ಸಮಸ್ತವೂ ಲಯವಾಗುವದು.
Kannada Bible (KNCL) BSI 2016
ನಾನು ಭೂಮಿಯ ಮೇಲೆ ಜಲಪ್ರಳಯವನ್ನು ಬರಮಾಡಲಿದ್ದೇನೆ. ಅದು ಆಕಾಶದ ಕೆಳಗಿರುವ ಸಕಲ ಪ್ರಾಣಿಗಳನ್ನೂ ಅಳಿಸಿಬಿಡುವುದು. ಭೂಮಿಯಲ್ಲಿರುವ ಸಮಸ್ತವೂ ನಾಶವಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಆಕಾಶದ ಕೆಳಗಿರುವ ಜೀವಶ್ವಾಸವುಳ್ಳ ಸಕಲ ಪ್ರಾಣಿಗಳನ್ನು ನಾಶಮಾಡುವುದಕ್ಕೆ ಜಲಪ್ರಳಯವನ್ನು ಭೂಮಿಯ ಮೇಲೆ ಬರಮಾಡುತ್ತೇನೆ. ಆಗ ಭೂಮಿಯಲ್ಲಿರುವುದೆಲ್ಲವೂ ನಾಶವಾಗುವುದು.