Genesis 6:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇದಲ್ಲದೆ, ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಯಲ್ಲಿ ಒಂದು ಗಂಡನ್ನೂ ಒಂದು ಹೆಣ್ಣನ್ನೂ ನಾವೆಯೊಳಗೆ ಸೇರಿಸಿಕೊ. ನಿನ್ನೊಡನೆ ಅವುಗಳನ್ನು ಜೀವದಿಂದುಳಿಸಿ ಕಾಪಾಡು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಜೀವಿಗಳ ಪ್ರತಿ ಜಾತಿಯಲ್ಲಿಯೂ ಒಂದು ಗಂಡು ಒಂದು ಹೆಣ್ಣು ಹೀಗೆ ಎರಡೆರಡನ್ನು ನಾವೆಯಲ್ಲಿ ಸೇರಿಸಿ, ನಿನ್ನೊಂದಿಗೆ ಉಳಿಸಿ ಕಾಪಾಡಿಕೊಳ್ಳಬೇಕು.
Kannada BSI Bible 2016
ಇದಲ್ಲದೆ ಜೀವವುಳ್ಳ ಎಲ್ಲಾ ಶರೀರಗಳ ಎಲ್ಲಾ ವಿಧವಾದ ಎರಡೆರಡು ನಿನ್ನ ಸಂಗಡ ಜೀವದಲ್ಲಿ ಕಾಪಾಡುವಂತೆ ನೀನು ಅವುಗಳನ್ನು ನಾವೆಯೊಳಗೆ ತರಬೇಕು; ಅವು ಗಂಡು ಹೆಣ್ಣಾಗಿರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಜೀವಿಗಳ ಪ್ರತಿಜಾತಿಯಲ್ಲಿಯೂ ಒಂದು ಗಂಡು ಒಂದು ಹೆಣ್ಣು ಹೀಗೆ ಎರಡೆರಡನ್ನು ನಾವೆಯಲ್ಲಿ ಸೇರಿಸಿ ನಿನ್ನೊಂದಿಗೆ ಉಳಿಸಿ ಕಾಪಾಡಬೇಕು.
Kannada Bible (KNCL) BSI 2016
ಅಲ್ಲದೆ, ನಿನ್ನೊಡನೆ ಬದುಕಿಸಲು ಜೀವಿಗಳ ಪ್ರತಿಯೊಂದು ಜಾತಿಯಲ್ಲೂ ಒಂದು ಗಂಡು, ಒಂದು ಹೆಣ್ಣು ಹೀಗೆ ಒಂದೊಂದು ಜೊತೆಯನ್ನು ನಾವೆಯಲ್ಲಿ ಸೇರಿಸಿಕೊ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜೀವಿಗಳ ಪ್ರತಿಜಾತಿಯಲ್ಲೂ ಒಂದು ಗಂಡು, ಒಂದು ಹೆಣ್ಣು; ಹೀಗೆ ಎರಡೆರಡನ್ನು ನಾವೆಯಲ್ಲಿ ಸೇರಿಸಿ ನಿನ್ನೊಂದಿಗೆ ಜೀವಂತವಾಗಿ ಉಳಿಸಿಕೊಳ್ಳಬೇಕು.