Genesis 6:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜನರ ದುಷ್ಟತನ ಈ ಹೆಣ್ಣುಮಕ್ಕಳ ಸೌಂದರ್ಯವನ್ನು ಕಂಡ ದೇವಪುತ್ರರು ತಮಗೆ ಬೇಕಾದ ಸ್ತ್ರೀಯರನ್ನು ಆರಿಸಿಕೊಂಡು ಮದುವೆಯಾದರು. ಈ ಸ್ತ್ರೀಯರು ಮಕ್ಕಳನ್ನು ಹೆತ್ತರು. ಆ ಕಾಲದಲ್ಲಿ ಮತ್ತು ಆ ಕಾಲದನಂತರ ನೆಫೇಲಿಯರು ಆ ನಾಡಿನಲ್ಲಿ ವಾಸವಾಗಿದ್ದರು. ಅವರು ಪ್ರಸಿದ್ಧರಾದ ಪರಾಕ್ರಮಶಾಲಿಗಳಾಗಿದ್ದರು. ಬಳಿಕ ಯೆಹೋವನು, “ಜನರು ಕೇವಲ ಮಾನವರಷ್ಟೆ; ನನ್ನ ಆತ್ಮವು ಅವರಿಂದ ಯಾವಾಗಲೂ ತೊಂದರೆಗೆ ಗುರಿಯಾಗಕೂಡದು. ಅವರು 120 ವರ್ಷ ಬದುಕುವಂತೆ ಮಾಡುವೆನು” ಅಂದುಕೊಂಡನು. (Verses 2-4)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೌಂದರ್ಯವುಳ್ಳವರಾಗಿರುವುದನ್ನು ನೋಡಿ ದೇವಪುತ್ರರು ತಮಗೆ ಇಷ್ಟವಾದವರನ್ನು ಹೆಂಡತಿಯರನ್ನಾಗಿ ಮಾಡಿಕೊಂಡರು.
Kannada BSI Bible 2016
ಆಗ ದೇವಕುಮಾರರು ಮನುಷ್ಯ ಕುಮಾರ್ತೆಯರ ಸೌಂದರ್ಯವನ್ನು ನೋಡಿ ತಾವು ಆರಿಸಿಕೊಂಡವರನ್ನೆಲ್ಲಾ ತಮಗೆ ಹೆಂಡತಿಯ ರನ್ನಾಗಿ ಮಾಡಿಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವಪುತ್ರರು ಮನುಷ್ಯಪುತ್ರಿಯರ ಸೌಂದರ್ಯವನ್ನು ನೋಡಿ ತಮಗೆ ಇಷ್ಟರಾದವರನ್ನು ಹೆಂಡರನ್ನಾಗಿ ಮಾಡಿಕೊಂಡರು.
Kannada Bible (KNCL) BSI 2016
ಈ ಮನುಷ್ಯಪುತ್ರಿಯರ ಚೆಲುವನ್ನು ಕಂಡು ದೇವಪುತ್ರರು ತಮಗೆ ಇಷ್ಟಬಂದವರನ್ನೆಲ್ಲ ಮದುವೆಯಾದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ದೇವಪುತ್ರರು, ಮನುಷ್ಯ ಪುತ್ರಿಯರ ಸೌಂದರ್ಯವನ್ನು ಕಂಡು ಅವರನ್ನು ಆರಿಸಿಕೊಂಡು, ತಮಗೆ ಹೆಂಡತಿಯರನ್ನಾಗಿ ಮಾಡಿಕೊಂಡರು.