Genesis 6:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಭೂಮಿಯ ಮೇಲಿರುವ ಪ್ರತಿಯೊಂದು ಬಗೆಯ ಪಕ್ಷಿಗಳಲ್ಲಿ ಎರಡೆರಡೂ ಪ್ರತಿಯೊಂದು ಪ್ರಾಣಿಗಳಲ್ಲಿ ಎರಡೆರಡೂ ಮತ್ತು ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಜಂತುಗಳಲ್ಲಿ ಎರಡೆರಡೂ ತಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುವುದಕ್ಕಾಗಿ ನಿನ್ನೊಂದಿಗಿರಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪಶು, ಪಕ್ಷಿ, ಕಾಡುಮೃಗ, ಕ್ರಿಮಿ, ಕೀಟ ಇವುಗಳ ಸಕಲ ಜಾತಿಗಳಲ್ಲಿಯೂ ಎರಡೆರಡು ಬದುಕುವುದಕ್ಕಾಗಿ ನಿನ್ನ ಬಳಿಗೆ ಬರುವವು.
Kannada BSI Bible 2016
ಪಶುಪಕ್ಷಿಗಳಲ್ಲಿ ಅವುಗಳ ಜಾತ್ಯಾನುಸಾರವಾಗಿಯೂ ಭೂಮಿಯಲ್ಲಿ ರುವ ಸಕಲ ಕ್ರಿಮಿಗಳಲ್ಲಿಯೂ ಎಲ್ಲಾ ತರವಾದದ್ದರಲ್ಲಿ ಎರಡೆ ರಡು ಜೀವದಲ್ಲಿ ಅವುಗಳನ್ನು ನೀನು ಕಾಪಾಡು ವಂತೆ ನಿನ್ನ ಬಳಿಗೆ ಬರುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪಶು, ಪಕ್ಷಿ, ಕ್ರಿವಿು ಇವುಗಳ ಸಕಲ ಜಾತಿಗಳಲ್ಲಿಯೂ ಎರಡೆರಡು ಬದುಕುವದಕ್ಕಾಗಿ ನಿನ್ನ ಬಳಿಗೆ ಬರುವವು.
Kannada Bible (KNCL) BSI 2016
ಪ್ರಾಣಿಪಕ್ಷಿ, ಕ್ರಿಮಿಕೀಟ ಇವುಗಳ ಸಕಲ ಜಾತಿಗಳಲ್ಲಿ ಎರಡೆರಡು ಬದುಕಿಬಾಳಲು ನಿನ್ನೊಡನೆ ಬರಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪಕ್ಷಿಗಳಲ್ಲಿ ಅವುಗಳ ಜಾತಿಗನುಸಾರವಾಗಿ, ಪ್ರಾಣಿಗಳಲ್ಲಿ ಅವುಗಳ ಜಾತಿಗನುಸಾರವಾಗಿ ಮತ್ತು ನೆಲದ ಮೇಲೆ ಹರಿದಾಡುವ ಸಕಲ ಜೀವಿಗಳಲ್ಲಿ ಅವುಗಳ ಜಾತಿಗನುಸಾರವಾಗಿ ಎರಡೆರಡು ಬದುಕಿಬಾಳಲು ಅವುಗಳನ್ನು ನೀನು ಕಾಪಾಡುವಂತೆ ನಿನ್ನ ಬಳಿಗೆ ಬರುವುವು.