Genesis 6:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಭೂಮಿಯ ಮೇಲೆ ದೊರೆಯುವ ಎಲ್ಲಾ ಬಗೆಯ ಆಹಾರವನ್ನು ನಿಮಗಾಗಿಯೂ ಮತ್ತು ಪ್ರಾಣಿಗಳಿಗಾಗಿಯೂ ನಾವೆಯಲ್ಲಿ ತುಂಬಿಸಿಕೊ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನಗೂ ಅವುಗಳಿಗೂ ಪೋಷಣೆಯಾಗುವಂತೆ ಸಕಲ ವಿಧವಾದ ಆಹಾರ ಪದಾರ್ಥಗಳನ್ನು ನಿನ್ನ ಬಳಿಯಲ್ಲಿ ಕೂಡಿಸಿಟ್ಟುಕೊಳ್ಳಬೇಕು” ಎಂದು ಹೇಳಿದನು.
Kannada BSI Bible 2016
ತಿನ್ನತಕ್ಕ ಆಹಾರ ವನ್ನೆಲ್ಲಾ ನಿನ್ನ ಕೂಡ ತೆಗೆದುಕೊಂಡು ನಿನ್ನ ಬಳಿಯಲ್ಲಿ ಕೂಡಿಸಿಕೋ; ಅದು ನಿನಗೂ ಅವುಗಳಿಗೂ ಆಹಾರ ವಾಗಿರುವದು ಎಂದು ಹೇಳಿದನು.ಹಾಗೆಯೇ ನೋಹನು ಮಾಡಿದನು; ದೇವರು ಅವನಿಗೆ ಅಪ್ಪಣೆಕೊಟ್ಟ ಪ್ರಕಾರವೇ ಅವನು ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ನಿನಗೂ ಅವುಗಳಿಗೂ ಪೋಷಣೆಯಾಗುವಂತೆ ಸಕಲ ವಿಧವಾದ ಆಹಾರ ಪದಾರ್ಥಗಳನ್ನು ನಿನ್ನ ಬಳಿಯಲ್ಲಿ ಕೂಡಿಸಿಡಬೇಕು ಎಂದು ಹೇಳಿದನು.
Kannada Bible (KNCL) BSI 2016
ಎಲ್ಲ ತರಹದ ಭೋಜನಪದಾರ್ಥಗಳನ್ನು ಶೇಖರಿಸಿಟ್ಟುಕೊ. ಅದು ನಿನಗೂ ಪ್ರಾಣಿಗಳಿಗೂ ಆಹಾರವಾಗುವುದು,” ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು, ಎಲ್ಲ ವಿಧವಾದ ಆಹಾರ ಪದಾರ್ಥಗಳನ್ನು ಕೂಡಿಸಿಡಬೇಕು. ಅದು ನಿಮಗೂ ಮತ್ತು ಪ್ರಾಣಿಗಳಿಗೂ ಆಹಾರವಾಗಿರಬೇಕು,” ಎಂದು ಹೇಳಿದರು.