Genesis 6:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
See verse 2
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ದೇವಪುತ್ರರು ಮನುಷ್ಯ ಪುತ್ರಿಯರೊಂದಿಗೆ ಸಂಗಮಿಸಿದಾಗ ಮಕ್ಕಳು ಹುಟ್ಟಿದರು. ಆ ಕಾಲದಿಂದಲೂ ಅದಾದ ನಂತರವೂ ಜಗದಲ್ಲಿ ನೆಫೀಲಿಯರು ಇದ್ದರು. ಇವರೇ ಪೂರ್ವಕಾಲದಲ್ಲಿ ಪ್ರಸಿದ್ಧರಾಗಿದ್ದ ಪರಾಕ್ರಮಶಾಲಿಗಳು ಎಂದು ಹೆಸರಾದವರು.
Kannada BSI Bible 2016
ಆ ದಿನಗಳಲ್ಲಿ ಭೂಮಿಯ ಮೇಲೆ ಮಹಾ ಶರೀರಗಳಾದವರು ಇದ್ದರು, ಆಮೇಲೆಯೂ ಇದ್ದರು; ದೇವಕುಮಾರರು ಮನುಷ್ಯ ಕುಮಾರ್ತೆಯರನ್ನು ಕೂಡಿದಾಗ ಅವರಿಗೆ ಮಕ್ಕಳನ್ನು ಹೆತ್ತರು. ಇವರೇ ಪೂರ್ವಕಾಲದಲ್ಲಿ ಪ್ರಸಿದ್ಧರಾದ ಪರಾಕ್ರಮಶಾಲಿ ಗಳಾಗಿದ್ದವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಕಾಲದಲ್ಲಿ ಅಂದರೆ ದೇವಪುತ್ರರು ಮನುಷ್ಯಪುತ್ರಿಯರನ್ನು ಕೂಡಿ ಅವರಲ್ಲಿ ಮಕ್ಕಳನ್ನು ಪಡೆಯುವ ಕಾಲದಲ್ಲಿ ಮಹಾಶರೀರಿಗಳು ಭೂವಿುಯ ಮೇಲಿದ್ದರು; ಅನಂತರದಲ್ಲಿಯೂ ಇದ್ದರು. ಪೂರ್ವದಲ್ಲಿ ಹೆಸರುಗೊಂಡ ಪರಾಕ್ರಮಶಾಲಿಗಳು ಇವರೇ.
Kannada Bible (KNCL) BSI 2016
ದೇವಪುತ್ರರೂ ಮನುಷ್ಯಪುತ್ರಿಯರೂ ಕೂಡಿ ಮಕ್ಕಳು ಹುಟ್ಟಿದರು. ಆ ಕಾಲದಿಂದಲೂ ಅದಾದನಂತರವೂ ಜಗದಲ್ಲಿ ‘ನೆಪೀಲಿಯರು’ ಇದ್ದರು. ಇವರೇ ಪ್ರಾಚೀನಕಾಲದ ಸುಪ್ರಸಿದ್ಧ ಪರಾಕ್ರಮಿಗಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ದಿನಗಳಲ್ಲಿ ಭೂಮಿಯ ಮೇಲೆ ನೆಫೀಲಿಯೆಂಬ ರಾಕ್ಷಸ ವಂಶದವರು ಇದ್ದರು. ನಂತರದಲ್ಲಿಯೂ ಇದ್ದರು. ದೇವಪುತ್ರರು ಮನುಷ್ಯ ಪುತ್ರಿಯರೊಂದಿಗೆ ಕೂಡಿದಾಗ, ಮಕ್ಕಳು ಹುಟ್ಟಿದರು. ಇವರೇ ಪೂರ್ವಕಾಲದಲ್ಲಿ ಪ್ರಸಿದ್ಧರಾಗಿದ್ದ ಪರಾಕ್ರಮಿಗಳು.