Genesis 7:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಮೇಲೆ ಯೆಹೋವನು ನೋಹನಿಗೆ, “ಈ ಕಾಲದವರಲ್ಲಿ ನೀನೊಬ್ಬನೇ ನೀತಿವಂತನಾಗಿರುವೆ. ಆದ್ದರಿಂದ ನಿನ್ನ ಕುಟುಂಬದವರೆಲ್ಲರನ್ನು ಕರೆದುಕೊಂಡು ನಾವೆಯೊಳಗೆ ಹೋಗು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೆಹೋವನು ನೋಹನಿಗೆ, “ನೀನೂ ನಿನ್ನ ಮನೆಯವರೆಲ್ಲರೂ ನಾವೆಯಲ್ಲಿ ಸೇರಿರಿ; ಈಗಿರುವ ಮನುಷ್ಯ ಸಂತತಿಯಲ್ಲಿ ನೀನೊಬ್ಬನೇ ನನ್ನ ಮುಂದೆ ನೀತಿಯಿಂದ ನಡೆಯುವುದನ್ನು ನೋಡಿದ್ದೇನೆ.
Kannada BSI Bible 2016
ಕರ್ತನು ನೋಹನಿಗೆ--ನೀನೂ ನಿನ್ನ ಮನೆಯವರೆಲ್ಲರೂ ನಾವೆಯೊಳಗೆ ಬನ್ನಿರಿ; ಯಾಕಂದರೆ ಈ ಸಂತತಿಯಲ್ಲಿ ನೀನೊಬ್ಬನೇ ನನ್ನ ಮುಂದೆ ನೀತಿವಂತನಾಗಿರುವದನ್ನು ನಾನು ನೋಡಿ ದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೆಹೋವನು ನೋಹನಿಗೆ - ನೀನೂ ನಿನ್ನ ಮನೆಯವರೆಲ್ಲರೂ ನಾವೆಯಲ್ಲಿ ಸೇರಿರಿ; ಈಗಿನವರಲ್ಲಿ ನೀನೊಬ್ಬನೇ ನನ್ನ ಮುಂದೆ ನೀತಿವಂತನಾಗಿ ನಡೆಯುವದನ್ನು ನೋಡಿದ್ದೇನೆ.
Kannada Bible (KNCL) BSI 2016
ಸರ್ವೇಶ್ವರ ಸ್ವಾಮಿ ನೋಹನಿಗೆ, \ನೀನೂ ನಿನ್ನ ಮನೆಯವರೆಲ್ಲರೂ ನಾವೆಯನ್ನು ಸೇರಿಕೊಳ್ಳಿರಿ; ಈಗಿನ ಪೀಳಿಗೆಯಲ್ಲಿ ನೀನೊಬ್ಬನೇ ನನ್ನ ದೃಷ್ಟಿಗೆ ಸತ್ಪುರುಷ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ನೋಹನಿಗೆ, “ನೀನೂ, ನಿನ್ನ ಮನೆಯವರೆಲ್ಲರೂ ನಾವೆಯೊಳಗೆ ಸೇರಿಕೊಳ್ಳಿರಿ. ಏಕೆಂದರೆ ಈ ಕಾಲದವರಲ್ಲಿ ನೀನೊಬ್ಬನೇ ನನ್ನ ಮುಂದೆ ನೀತಿವಂತನಾಗಿರುವುದನ್ನು ನಾನು ನೋಡಿದ್ದೇನೆ.