Genesis 7:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎರಡನೆ ತಿಂಗಳಿನ ಹದಿನೇಳನೆಯ ದಿನದಂದು ಭೂಮಿಯ ಕೆಳಗಿರುವ ಸಾಗರದ ಸೆಲೆಗಳು ಒಡೆದು ಭೂಮಿಯೊಳಗಿಂದ ನೀರು ಮೇಲೇರತೊಡಗಿತು; ಭೂಮಿಯ ಮೇಲೆ ಭಾರಿಮಳೆ ಸುರಿಯತೊಡಗಿತು. ಆಕಾಶದ ಕಿಟಕಿ ತೆರೆದಿದೆಯೋ ಎಂಬಂತೆ ನಲವತ್ತು ದಿವಸ ಹಗಲಿರುಳು ಮಳೆ ಸುರಿಯಿತು. ಆ ದಿನದಂದು ನೋಹ ಮತ್ತು ಅವನ ಹೆಂಡತಿ, ಅವನ ಗಂಡುಮಕ್ಕಳಾದ ಶೇಮ್, ಹಾಮ್, ಯೆಫೆತ್ ಮತ್ತು ಅವನ ಸೊಸೆಯಂದಿರು ನಾವೆಯೊಳಗೆ ಹೋದರು. ಆಗ ನೋಹನು ಆರುನೂರು ವರ್ಷದ ವೃದ್ಧನಾಗಿದ್ದನು. (Verses 11-13)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೋಹನ ಜೀವಮಾನದ ಆರುನೂರು ವರ್ಷದ ಎರಡನೆಯ ತಿಂಗಳಿನ ಹದಿನೇಳನೆಯ ದಿನದಲ್ಲಿ ಭೂಮಿಯ ಕೆಳಗಿರುವ ಸಾಗರದ ಒರತೆಗಳು ತೆರೆದುಕೊಂಡವು; ಆಕಾಶದ ತೂಬುಗಳೂ ತೆರೆದವು.
Kannada BSI Bible 2016
ನೋಹನ ಜೀವಮಾನದ ಆರುನೂರನೆಯ ವರುಷದ ಎರಡನೆಯ ತಿಂಗಳಿನ ಅಂದರೆ ಅದೇ ತಿಂಗಳಿನ ಹದಿನೇಳನೆಯ ದಿವಸದಲ್ಲಿಯೇ ಮಹಾ ಅಗಾಧದ ಬುಗ್ಗೆಗಳೆಲ್ಲಾ ಒಡೆದವು. ಆಕಾಶದ ಕಿಟಕಿ ಗಳು ತೆರೆಯಲ್ಪಟ್ಟವು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೋಹನ ಜೀವಮಾನದ ಆರುನೂರನೆಯ ವರುಷದ ಎರಡನೆಯ ತಿಂಗಳಿನ ಹದಿನೇಳನೆಯ ದಿನದಲ್ಲಿ ಭೂವಿುಯ ಕೆಳಗಿರುವ ಸಾಗರದ ಸೆಲೆಗಳು ಒಡೆದವು; ಆಕಾಶದ ತೂಬುಗಳು ತೆರೆದವು.
Kannada Bible (KNCL) BSI 2016
ನೋಹನ ಜೀವಮಾನದ ಆರುನೂರನೆಯ ವರ್ಷದ ಎರಡನೆಯ ತಿಂಗಳಿನ ಹದಿನೇಳನೆಯ ದಿನ ಭೂಮಿಯ ಅಡಿಸಾಗರದ ಸೆಲೆಗಳು ಒಡೆದವು. ಆಕಾಶದ ತೂಬುಗಳು ತೆರೆದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೋಹನ ಜೀವನದ ಆರುನೂರು ವರ್ಷದ ಎರಡನೆಯ ತಿಂಗಳಿನ ಹದಿನೇಳನೆಯ ದಿವಸದಲ್ಲಿಯೇ ಮಹಾಸಾಗರದ ಸೆಲೆಗಳು ಒಡೆದವು. ಆಕಾಶದ ಪ್ರವಾಹದ ದ್ವಾರಗಳು ತೆರೆದವು.