Genesis 7:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಭೂಮಿಯ ಮೇಲೆ ಜಲಪ್ರಳಯವು ನಲವತ್ತು ದಿನಗಳವರೆಗೆ ಇತ್ತು. ನೀರು ಮೇಲೇರುತ್ತಾ ನಾವೆಯನ್ನು ಎತ್ತಲು ಅದು ನೀರಿನ ಮೇಲೆ ತೇಲತೊಡಗಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜಲಪ್ರಳಯವು ನಲ್ವತ್ತು ದಿನ ಭೂಮಿಯ ಮೇಲೆ ಬಂದು ನೀರು ಹೆಚ್ಚುತ್ತಾ ನಾವೆಯನ್ನು ಮೇಲಕ್ಕೆ ಎತ್ತಲು ಅದು ನೀರಿನ ಮೇಲೆ ತೇಲಾಡಿತು.
Kannada BSI Bible 2016
ನಾಲ್ವತ್ತು ದಿನ ಭೂಮಿಯ ಮೇಲೆ ಪ್ರಳಯವು ಇತ್ತು; ಆಗ ನೀರುಗಳು ಹೆಚ್ಚಿ ನಾವೆಯನ್ನು ಎತ್ತಲು ಅದು ಭೂಮಿಯಿಂದ ಎತ್ತಲ್ಪಟ್ಟಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಜಲಪ್ರಳಯವು ನಾಲ್ವತ್ತು ದಿನ ಭೂವಿುಯ ಮೇಲೆ ಇದ್ದು ನೀರು ಹೆಚ್ಚುತ್ತಾ ನಾವೆಯನ್ನು ಎತ್ತಲು ಅದು ನೀರಿನ ಮೇಲೆ ತೇಲಾಡಿತು.
Kannada Bible (KNCL) BSI 2016
ಜಲಪ್ರಳಯಡ ಮಳೆ ನಲವತ್ತು ದಿನ ಭೂಮಿಯ ಮೇಲೆ ಒಂದೇ ಸಮನೆ ಸುರಿಯಿತು. ನೀರು ಹೆಚ್ಚುತ್ತಾ ನಾವೆಯನ್ನು ಮೇಲೆತ್ತಲು ಅದು ನೀರಿನ ಮೇಲೆ ತೇಲತೊಡಗಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಲವತ್ತು ದಿನ ಭೂಮಿಯ ಮೇಲೆ ಪ್ರಳಯವು ಬಂದು, ನೀರು ಹೆಚ್ಚಿ ನಾವೆಯನ್ನು ಮೇಲಕ್ಕೆ ಎತ್ತಲು ಅದು ಭೂಮಿಯಿಂದ ತೇಲಾಡಿತು.