Genesis 7:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಲ್ಲಾ ಬಗೆಯ ಶುದ್ಧಪ್ರಾಣಿಗಳಲ್ಲಿ ಏಳೇಳು ಜೋಡಿಗಳನ್ನು (ಏಳು ಗಂಡನ್ನು ಮತ್ತು ಏಳು ಹೆಣ್ಣನ್ನು) ತೆಗೆದುಕೊ. ಭೂಮಿಯ ಮೇಲಿನ ಇತರ ಪ್ರಾಣಿಗಳಲ್ಲಿ ಒಂದೊಂದು ಜೋಡಿಯನ್ನು (ಒಂದು ಗಂಡನ್ನು ಮತ್ತು ಒಂದು ಹೆಣ್ಣನ್ನು) ತೆಗೆದುಕೊ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಲ್ಲಾ ಶುದ್ಧ ಪಶುಗಳಲ್ಲಿ ಏಳೇಳು ಗಂಡುಹೆಣ್ಣುಗಳನ್ನು ಶುದ್ಧವಲ್ಲದ ಪಶುಗಳಲ್ಲಿ ಎರಡೆರಡು ಗಂಡುಹೆಣ್ಣುಗಳನ್ನೂ ನಿನ್ನೊಂದಿಗೆ ತೆಗೆದುಕೊಳ್ಳಬೇಕು.
Kannada BSI Bible 2016
ಶುದ್ಧವಾದ ಎಲ್ಲಾ ಪ್ರಾಣಿಗಳಲ್ಲಿ ಗಂಡು ಹೆಣ್ಣಾಗಿರುವ ಏಳೇಳೂ ಅಶುದ್ಧ ಪ್ರಾಣಿಗಳಲ್ಲಿ ಗಂಡು ಹೆಣ್ಣು ಎರಡೆರಡರಂತೆಯೂ ನಿನ್ನ ಬಳಿಗೆ ತೆಗೆದುಕೋ.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಲ್ಲಾ ಶುದ್ಧಪಶುಗಳಲ್ಲಿ ಏಳೇಳು ಗಂಡು ಹೆಣ್ಣುಗಳನ್ನೂ ಶುದ್ಧವಲ್ಲದ ಪಶುಗಳಲ್ಲಿ ಎರಡೆರಡು ಗಂಡು ಹೆಣ್ಣುಗಳನ್ನೂ ನಿನ್ನೊಂದಿಗೆ ತೆಗೆದುಕೋ.
Kannada Bible (KNCL) BSI 2016
ಎಲ್ಲ ಶುದ್ಧ ಪ್ರಾಣಿಗಳಲ್ಲಿ ಏಳೇಳು ಗಂಡುಹೆಣ್ಣುಗಳನ್ನು ಶುದ್ಧವಲ್ಲದ ಪ್ರಾಣಿಗಳಲ್ಲಿ ಎರಡೆರಡು ಗಂಡುಹೆಣ್ಣುಗಳನ್ನೂ ನಿನ್ನೊಂದಿಗೆ ಕರೆದುಕೊ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಲ್ಲಾ ಶುದ್ಧ ಪಶುಗಳಲ್ಲಿ ಏಳೇಳು ಗಂಡು, ಹೆಣ್ಣುಗಳನ್ನೂ, ಶುದ್ಧವಲ್ಲದ ಪಶುಗಳಲ್ಲಿ ಎರಡೆರಡು ಗಂಡು, ಹೆಣ್ಣುಗಳನ್ನೂ ನಿನ್ನೊಂದಿಗೆ ತೆಗೆದುಕೊಳ್ಳಬೇಕು.