Genesis 7:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೀಗೆ ದೇವರು ಭೂಮಿಯ ಮೇಲಿದ್ದ ಪ್ರತಿಯೊಂದು ಜೀವಿಯನ್ನು ನಾಶಗೊಳಿಸಿದನು. ಪ್ರತಿಯೊಬ್ಬ ಮನುಷ್ಯನು ನಾಶವಾದನು; ಪ್ರತಿಯೊಂದು ಪ್ರಾಣಿಯು, ಹರಿದಾಡುವ ಪ್ರತಿಯೊಂದು ಕ್ರಿಮಿಯು ಮತ್ತು ಪ್ರತಿಯೊಂದು ಪಕ್ಷಿಯು ನಾಶವಾದವು. ಉಳಿದುಕೊಂಡವರೆಂದರೆ, ನೋಹ ಮತ್ತು ಅವನ ಕುಟುಂಬದವರು ಹಾಗೂ ಅವನೊಡನೆ ನಾವೆಯೊಳಗಿದ್ದ ಜೀವಿಗಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮನುಷ್ಯ ಮೊದಲುಗೊಂಡು ಪಶು, ಪಕ್ಷಿ, ಕ್ರಿಮಿಕೀಟಗಳ ವರೆಗೂ ಭೂಮಿಯ ಮೇಲಿದ್ದದ್ದೆಲ್ಲಾ ನಾಶವಾಯಿತು; ನೋಹನೂ ಅವನೊಂದಿಗೆ ನಾವೆಯಲ್ಲಿದ್ದ ಜೀವಿಗಳೂ ಮಾತ್ರ ಉಳಿದುಕೊಂಡವು.
Kannada BSI Bible 2016
ಮನುಷ್ಯರೂ ಪಶು ಗಳೂ ಕ್ರಿಮಿಗಳೂ ಆಕಾಶದ ಪಕ್ಷಿಗಳೂ ಭೂಮಿಯ ಮೇಲಿರುವ ಎಲ್ಲಾ ಜೀವರಾಶಿಗಳೂ ನಾಶವಾದವು. ಅವು ಭೂಮಿಯ ಮೇಲಿಂದ ಅಳಿಸಲ್ಪಟ್ಟವು. ನೋಹನೂ ಅವನ ಸಂಗಡ ನಾವೆಯಲ್ಲಿದ್ದವರೂ ಮಾತ್ರ ಜೀವದಿಂದ ಉಳಿಸಲ್ಪಟ್ಟರು.ಜಲವು ಭೂಮಿಯ ಮೇಲೆ ನೂರೈವತ್ತು ದಿನ ಪ್ರಬಲ ವಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮನುಷ್ಯರು ಮೊದಲುಗೊಂಡು ಪಶುಪಕ್ಷಿಕ್ರಿವಿುಗಳವರೆಗೂ ಭೂವಿುಯ ಮೇಲಿದ್ದದ್ದೆಲ್ಲಾ ನಾಶವಾಯಿತು; ಅವು ಭೂವಿುಯ ಮೇಲಿನಿಂದ ಲಯವಾಗಿ ಹೋದವು. ನೋಹನೂ ಅವನೊಂದಿಗೆ ನಾವೆಯಲ್ಲಿದ್ದ ಜೀವಿಗಳೂ ಮಾತ್ರ ಉಳಿದರು.
Kannada Bible (KNCL) BSI 2016
ಮನುಷ್ಯರು ಮೊದಲ್ಗೊಂಡು ಪ್ರಾಣಿಪಕ್ಷಿ, ಕ್ರಿಮಿಕೀಟದವರೆಗೆ ಭೂಮಿಯ ಮೇಲಿನದೆಲ್ಲವೂ ನಾಶವಾಯಿತು. ಭೂಮಿಯಿಂದ ಎಲ್ಲವೂ ನಿರ್ಮೂಲವಾಯಿತು. ನೋಹನು ಹಾಗೂ ಅವನೊಂದಿಗೆ ನಾವೆಯಲ್ಲಿದ್ದ ಜೀವಿಗಳು ಮಾತ್ರ ಉಳಿದುಕೊಂಡವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಮನುಷ್ಯರು, ಪಶುಪಕ್ಷಿ, ಕ್ರಿಮಿಕೀಟಗಳು, ಭೂಮಿಯ ಮೇಲಿದ್ದ ಎಲ್ಲಾ ಜೀವರಾಶಿಗಳೂ ನಾಶವಾಯಿತು. ಅವು ಭೂಮಿಯ ಮೇಲಿಂದ ಅಳಿದುಹೋದವು. ನೋಹನು ಮತ್ತು ಅವನ ಸಂಗಡ ನಾವೆಯಲ್ಲಿದ್ದವರು ಮಾತ್ರ ಜೀವಂತವಾಗಿ ಉಳಿದರು.