Genesis 7:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಏಳು ದಿನಗಳ ನಂತರ ನಾನು ದೊಡ್ಡ ಮಳೆಯನ್ನು ಭೂಮಿಯ ಮೇಲೆ ಸುರಿಸುವೆನು. ಈ ಮಳೆಯು ನಲವತ್ತು ದಿವಸ ಹಗಲಿರುಳು ಸುರಿಯುವುದು. ನಾನು ನಿರ್ಮಿಸಿದ ಪ್ರತಿಯೊಂದು ಜೀವಿಯನ್ನೂ ನಾನು ಭೂಮಿಯ ಮೇಲಿಂದ ಅಳಿಸಿಬಿಡುವೆನು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಳು ದಿನಗಳ ನಂತರ ನಾನು ಭೂಮಿಯ ಮೇಲೆ ನಲ್ವತ್ತು ದಿನ ಹಗಲಿರುಳು ಮಳೆಯನ್ನು ಸುರಿಸಿ, ನಾನು ಸೃಷ್ಟಿಮಾಡಿದ ಜೀವರಾಶಿಗಳನ್ನೆಲ್ಲಾ ಭೂಮಿಯ ಮೇಲಿನಿಂದ ನಾಶಮಾಡುತ್ತೇನೆ” ಎಂದು ಹೇಳಿದನು.
Kannada BSI Bible 2016
ಇನ್ನು ಏಳು ದಿವಸಗಳಲ್ಲಿ ಭೂಮಿಯ ಮೇಲೆ ನಾಲ್ವತ್ತು ಹಗಲು ನಾಲ್ವತು ರಾತ್ರಿ ಮಳೆಯು ಬರುವಂತೆ ನಾನು ಮಾಡುವೆನು. ನಾನು ಉಂಟುಮಾಡಿದ ಜೀವರಾಶಿಯನ್ನೆಲ್ಲಾ ಭೂಮುಖದಿಂದ ನಾಶಮಾಡು ತ್ತೇನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಏಳುದಿನಗಳ ನಂತರ ನಾನು ಭೂವಿುಯ ಮೇಲೆ ನಾಲ್ವತ್ತು ದಿವಸ ಹಗಲಿರುಳು ಮಳೆಯನ್ನು ಸುರಿಸಿ ನನ್ನಿಂದಾದ ಜೀವರಾಶಿಗಳನ್ನೆಲ್ಲಾ ಭೂವಿುಯ ಮೇಲಿನಿಂದ ಅಳಿಸಿಬಿಡುತ್ತೇನೆ ಎಂದು ಹೇಳಿದನು.
Kannada Bible (KNCL) BSI 2016
ಏಳು ದಿನಗಳಾನಂತರ ಭೂಮಿಯ ಮೇಲೆ ನಲವತ್ತು ದಿನ ಹಗಲಿರುಳೆನ್ನದೆ ಮಳೆ ಸುರಿಸುವೆನು; ನಾನು ಸೃಷ್ಟಿಮಾಡಿದ ಜೀವರಾಶಿಗಳನ್ನೆಲ್ಲ ಭೂಮಿಯಿಂದ ಅಳಿಸಿಹಾಕುವೆನು,” ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಳು ದಿವಸಗಳಾದ ಮೇಲೆ ಭೂಮಿಯ ಮೇಲೆ ನಲವತ್ತು ದಿನ ಹಗಲಿರುಳು ಮಳೆಯು ಬರುವಂತೆ ನಾನು ಮಾಡುವೆನು. ನಾನು ಉಂಟುಮಾಡಿದ ಪ್ರತಿಯೊಂದು ಜೀವರಾಶಿಯನ್ನೂ ಭೂಮಿಯ ಮೇಲಿಂದ ಅಳಿಸಿಬಿಡುತ್ತೇನೆ,” ಎಂದರು.