Genesis 8:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಸಾಯಂಕಾಲವೂ ಪಾರಿವಾಳ ನೋಹನ ಬಳಿಗೆ ಹಿಂತಿರುಗಿ ಬಂತು. ಅದರ ಕೊಕ್ಕಿನಲ್ಲಿ ಆಲೀವ್ ಮರದ ಎಲೆಯಿತ್ತು. ಇದರಿಂದ, ಭೂಮಿಯಲ್ಲಿ ಒಣನೆಲವಿದೆಯೆಂದು ನೋಹನು ತಿಳಿದುಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಂಜೆಯಲ್ಲಿ ಆ ಪಾರಿವಾಳವು ಅವನ ಬಳಿಗೆ ಹಿಂತಿರುಗಿ ಬರಲು, ಆಹಾ, ಅದರ ಬಾಯಲ್ಲಿ ಎಣ್ಣೆ ಮರದ ಹೊಸ ಚಿಗುರು ಇತ್ತು. ನೋಹನು ಅದನ್ನು ನೋಡಿ ನೀರು ಭೂಮಿಯ ಮೇಲಿಂದ ಇಳಿದು ಹೋಯಿತೆಂದು ತಿಳಿದುಕೊಂಡನು.
Kannada BSI Bible 2016
ಸಾಯಂಕಾಲದಲ್ಲಿ ಪಾರಿವಾಳವು ಅವನ ಬಳಿಗೆ ಬರಲಾಗಿ ಇಗೋ, ಕಿತ್ತಿದ್ದ ಹಿಪ್ಪೆ ಎಲೆಯು ಅದರ ಬಾಯಲ್ಲಿತ್ತು; ಆಗ ನೋಹನು ಭೂಮಿಯ ಮೇಲಿನಿಂದ ನೀರು ಕಡಿಮೆಯಾಯಿತೆಂದು ತಿಳು ಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಂಜೆಯಲ್ಲಿ ಆ ಪಾರಿವಾಳವು ಅವನ ಬಳಿಗೆ ತಿರಿಗಿ ಬರಲು, ಆಹಾ, ಅದರ ಬಾಯಲ್ಲಿ ಎಣ್ಣೇಮರದ ಹೊಸ ಚಿಗುರು ಇತ್ತು. ನೋಹನು ಅದನ್ನು ನೋಡಿ ನೀರು ಭೂವಿುಯ ಮೇಲಿಂದ ಹರಿದು ಇಳಿದು ಹೋಯಿತು ಎಂದು ತಿಳುಕೊಂಡನು.
Kannada Bible (KNCL) BSI 2016
ಸಂಜೆ ವೇಳೆಗೆ ಆ ಪಾರಿವಾಳ ಅವನ ಬಳಿಗೆ ಮರಳಿತು; ಆಗ ಇಗೋ! ಅದರ ಬಾಯಲ್ಲಿ ಎಣ್ಣೇಮರದ ಹೊಸ ಚಿಗುರಿತ್ತು. ಇದನ್ನು ನೋಡಿ ನೋಹನು ಭೂಮಿಯ ಮೇಲಿಂದ ನೀರು ಇಳಿದುಹೋಗಿದೆಯೆಂದು ತಿಳಿದುಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಂಜೆಯಲ್ಲಿ ಆ ಪಾರಿವಾಳವು ಅವನ ಬಳಿಗೆ ತಿರುಗಿ ಬರಲು, ಅದರ ಬಾಯಿಯಲ್ಲಿ ಓಲಿವ್ ಮರದ ಹೊಸ ಚಿಗುರು ಇತ್ತು. ನೋಹನು ಅದನ್ನು ನೋಡಿ ನೀರು ಭೂಮಿಯ ಮೇಲಿಂದ ಇಳಿದಿದೆಯೆಂದು ತಿಳಿದುಕೊಂಡನು.