Genesis 8:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ನೋಹನು ನಾವೆಯ ಬಾಗಿಲನ್ನು ತೆರೆದು ಸುತ್ತಲೂ ನೋಡಿದನು. ನೆಲವೆಲ್ಲಾ ಒಣಗಿತ್ತು. ಅಂದು ಮೊದಲನೆಯ ವರ್ಷದ ಮೊದಲನೆಯ ತಿಂಗಳ ಮೊದಲನೆಯ ದಿನವಾಗಿತ್ತು. ಆಗ ನೋಹನಿಗೆ ಆರುನೂರ ಒಂದು ವರ್ಷವಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆರುನೂರ ಒಂದನೆಯ ವರ್ಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಭೂಮಿಯ ಮೇಲಿದ್ದ ನೀರು ಇಳಿದಿತ್ತು. ನೋಹನು ನಾವೆಯ ಗವಾಕ್ಷಿಯನ್ನು ತೆಗೆದು ನೋಡಲಾಗಿ, ಆಹಾ, ಭೂಮಿಯು ಪೂರ್ಣವಾಗಿ ಒಣಗಿತ್ತು.
Kannada BSI Bible 2016
ಆರುನೂರ ಒಂದನೆಯ ವರುಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಆದದ್ದೇನಂದರೆ, ನೀರು ಭೂಮಿಯ ಮೇಲಿನಿಂದ ಒಣಗಿಹೋಗಿತ್ತು. ನೋಹನು ನಾವೆಯ ಮುಚ್ಚಳವನ್ನು ತೆಗೆದು ನೋಡಲಾಗಿ, ಇಗೋ, ಭೂಮಿಯು ಒಣಗಿಹೋಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆರುನೂರ ಒಂದನೆಯ ವರುಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಭೂವಿುಯ ಮೇಲಿದ್ದ ನೀರು ಇಳಿದಿತ್ತು. ನೋಹನು ನಾವೆಯ ಗವಸಣಿಗೆಯನ್ನು ತೆಗೆದು ನೋಡಲಾಗಿ, ಆಹಾ, ಭೂವಿುಯು ಆರಿಹೋಗಿತ್ತು.
Kannada Bible (KNCL) BSI 2016
ನೋಹನ 601 ನೆಯ ವರ್ಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಂದು ಭೂಮಿಯ ಮೇಲಿದ್ದ ನೀರು ಇಳಿದಿತ್ತು. ನೋಹನು ನಾವೆಯ ಗವಸಣಿಗೆಯನ್ನು ತೆಗೆದು ನೋಡಿದನು. ಇಗೋ, ಭೂಮಿಯ ತೇವ ಆರುತ್ತಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆರುನೂರ ಒಂದನೆಯ ವರ್ಷದ, ಮೊದಲನೆಯ ತಿಂಗಳಿನ, ಮೊದಲನೆಯ ದಿನದಲ್ಲಿ ಭೂಮಿಯ ಮೇಲಿದ್ದ ನೀರು ಇಳಿದಿತ್ತು. ನೋಹನು ನಾವೆಯ ಮೇಲಿನ ಮುಚ್ಚಳವನ್ನು ತೆಗೆದು ನೋಡಲಾಗಿ, ನೆಲವು ಒಣಗಿತ್ತು.