Genesis 8:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿಮ್ಮೊಡನೆ ನಾವೆಯೊಳಗಿದ್ದ ಎಲ್ಲಾ ಜೀವಿಗಳು ಅಂದರೆ ಎಲ್ಲಾ ಪಕ್ಷಿಗಳು, ಪ್ರಾಣಿಗಳು ಮತ್ತು ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದೂ ಹೊರಗೆ ಬರಲಿ. ಅವುಗಳ ಸಂತಾನವು ಹೆಚ್ಚೆಚ್ಚಾಗಲಿ; ಭೂಮಿಯ ಮೇಲೆಲ್ಲಾ ಅವು ತುಂಬಿಕೊಳ್ಳಲಿ” ಅಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಬಳಿಯಲ್ಲಿರುವ ಪಶು, ಪಕ್ಷಿ, ಕ್ರಿಮಿಕೀಟ ಮುಂತಾದ ಎಲ್ಲಾ ಜೀವಿಗಳೂ ಹೊರಗೆ ಬರಲಿ; ಅವುಗಳಿಗೆ ಭೂಮಿಯ ಮೇಲೆ ಬಹು ಸಂತಾನವಾಗಲಿ; ಅವು ಅಭಿವೃದ್ಧಿಯಾಗಿ ಹೆಚ್ಚಲಿ” ಎಂದು ಹೇಳಿದನು.
Kannada BSI Bible 2016
ನಿನ್ನ ಸಂಗಡ ಇರುವ ಎಲ್ಲಾ ಶರೀರದ ಪಕ್ಷಿಗಳೂ ಮೃಗಗಳೂ ಭೂಮಿಯ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳೂ ಎಲ್ಲಾ ಜೀವಜಂತುಗಳೂ ಭೂಮಿಯ ಮೇಲೆ ಅಭಿವೃದ್ಧಿಯಾಗಿ ಭೂಮಿಯಲ್ಲಿ ಹೆಚ್ಚುವ ಹಾಗೆ ಅವು ನಿನ್ನ ಸಂಗಡ ಹೊರಗೆ ಬರಮಾಡು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಬಳಿಯಲ್ಲಿರುವ ಪಶು, ಪಕ್ಷಿ, ಕ್ರಿವಿು ಮುಂತಾದ ಎಲ್ಲಾ ಜೀವಿಗಳೂ ಹೊರಗೆ ಬರಲಿ; ಅವುಗಳಿಗೆ ಭೂವಿುಯ ಮೇಲೆ ಬಹುಸಂತಾನವಾಗಲಿ; ಅವು ಅಭಿವೃದ್ಧಿಯಾಗಿ ಹೆಚ್ಚಲಿ ಎಂದು ಆಜ್ಞಾಪಿಸಲು
Kannada Bible (KNCL) BSI 2016
ನಿನ್ನ ಬಳಿಯಿರುವ ಪ್ರಾಣಿಪಕ್ಷಿ, ಕ್ರಿಮಿಕೀಟ ಮುಂತಾದ ಎಲ್ಲ ಜೀವಿಗಳೂ ಹೊರಗೆ ಬರಲಿ; ಅವುಗಳ ಸಂಖ್ಯೆ ಭೂಮಿಯಲ್ಲಿ ಬೆಳೆಯಲಿ; ಅವು ಹೆಚ್ಚಿ ವೃದ್ಧಿಯಾಗಲಿ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ಬಳಿಯಲ್ಲಿರುವ ಪಕ್ಷಿ, ಪಶು, ಕ್ರಿಮಿ, ಮುಂತಾದ ಎಲ್ಲಾ ಜೀವಿಗಳನ್ನು ಹೊರಗೆ ತೆಗೆದುಕೊಂಡು ಬಾ. ಅವುಗಳಿಗೆ ಭೂಮಿಯ ಮೇಲೆ ಬಹು ಸಂತಾನವಾಗಲಿ, ಅವು ಅಭಿವೃದ್ಧಿಯಾಗಿ ಹೆಚ್ಚಲಿ,” ಎಂದು ಹೇಳಿದರು.