Genesis 8:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಕಾಶದಿಂದ ಸುರಿಯುತ್ತಿದ್ದ ಮಳೆ ನಿಂತುಹೋಯಿತು. ಆಕಾಶದ ತೂಬುಗಳು ಮುಚ್ಚಿಹೋದವು. ಭೂಸೆಲೆಗಳಿಂದ ಉಕ್ಕುತ್ತಿದ್ದ ನೀರು ಸಹ ನಿಂತುಹೋಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಭೂಮಿಯ ಅಡಿಯಲ್ಲಿದ್ದ ಸಾಗರದ ಸೆಲೆಗಳೂ ಆಕಾಶದ ತೂಬುಗಳೂ ಮುಚ್ಚಿಕೊಂಡವು. ಆಕಾಶದಿಂದ ಸುರಿಯುತ್ತಿದ್ದ ಮಳೆ ನಿಂತು ಹೋಯಿತು. ಭೂಮಿಯ ಮೇಲಿದ್ದ ನೀರು ಕ್ರಮೇಣವಾಗಿ ತಗ್ಗುತ್ತಾ ಬಂತು.
Kannada BSI Bible 2016
ಅಗಾಧದ ಬುಗ್ಗೆಗಳೂ ಆಕಾಶದ ಕಿಟಕಿಗಳೂ ಮುಚ್ಚಲ್ಪಟ್ಟವು. ಇದಲ್ಲದೆ ಆಕಾಶದಿಂದ ಬೀಳುವ ಮಳೆಯೂ ನಿಂತಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಭೂವಿುಯ ಕೆಳಗಿರುವ ಸಾಗರದ ಸೆಲೆಗಳೂ ಆಕಾಶದ ತೂಬುಗಳೂ ಮುಚ್ಚಿಹೋದವು. ಆಕಾಶದಿಂದ ಸುರಿಯುತ್ತಿದ್ದ ಮಳೆ ನಿಂತುಹೋಯಿತು. ಆಗ ಭೂವಿುಯ ಮೇಲಿದ್ದ ನೀರು ಕ್ರಮವಾಗಿ ತಗ್ಗುತ್ತಾ ಬಂತು.
Kannada Bible (KNCL) BSI 2016
ಭೂಮಿಯ ಅಡಿಸಾಗರದ ಸೆಲೆಗಳು ಹಾಗೂ ಆಕಾಶದ ತೂಬುಗಳು ಮುಚ್ಚಿಹೋದವು; ಸುರಿಯುತ್ತಿದ್ದ ಮಳೆ ನಿಂತುಹೋಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಾತ್ರವಲ್ಲದೆ ಸಾಗರದ ಸೆಲೆಗಳೂ, ಆಕಾಶದ ದ್ವಾರಗಳೂ ಮುಚ್ಚಿಹೋದವು. ಆಕಾಶದಿಂದ ಬೀಳುವ ಮಳೆ ನಿಂತುಹೋಯಿತು.