Genesis 8:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಭೂಮಿ ಇರುವವರೆಗೆ ಬಿತ್ತನೆಕಾಲ, ಸುಗ್ಗಿಕಾಲ ಯಾವಾಗಲೂ ಇರುತ್ತವೆ. ಹಿಮಕಾಲ, ಬೇಸಿಗೆಕಾಲ, ಚಳಿಗಾಲ, ಹಗಲು ಮತ್ತು ರಾತ್ರಿ ಯಾವಾಗಲೂ ಇದ್ದೇ ಇರುತ್ತವೆ” ಎಂದು ಅಂದುಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಭೂಮಿಯು ಇರುವವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ ಚಳಿಯೂ, ಮಳೆಯೂ, ಬೇಸಿಗೆ ಕಾಲವೂ, ಹಿಮಕಾಲವೂ, ಹಗಲೂ, ಇರುಳೂ ಇವುಗಳ ಕ್ರಮ ನಿಂತುಹೋಗುವುದಿಲ್ಲ” ಎಂದನು.
Kannada BSI Bible 2016
ಭೂಮಿಯು ಇರುವ ವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ ತಂಪೂ ಶೆಕೆಯೂ ಬೇಸಿಗೆಯೂ ಚಳಿಗಾಲವೂ ಹಗಲೂ ರಾತ್ರಿಯೂ ನಿಂತು ಹೋಗವು ಎಂದು ಅಂದು ಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಭೂವಿುಯು ಇರುವ ತನಕ ಬಿತ್ತನೆಯೂ ಕೊಯಿಲೂ, ಚಳಿಯೂ ಸೆಕೆಯೂ, ಬೇಸಿಗೆಕಾಲವೂ ಹಿಮಕಾಲವೂ, ಹಗಲೂ ಇರುಳೂ ಇವುಗಳ ಕ್ರಮ ತಪ್ಪುವದೇ ಇಲ್ಲ ಅಂದುಕೊಂಡನು.
Kannada Bible (KNCL) BSI 2016
ಬಿತ್ತನೆ - ಕೊಯಿಲು ಚಳಿ - ಬಿಸಿಲು ಗ್ರೀಷ್ಮ - ಹೇಮಂತ ಹಗಲು - ಇರುಳು ಈ ಕ್ರಮಕ್ಕೆ ಇರದು ಅಂತ್ಯ ಜಗವಿರುವವರೆಗು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಭೂಮಿಯು ಇರುವವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ; ತಂಪೂ ಸೆಕೆಯೂ; ಬೇಸಿಗೆಯೂ ಹಿಮಕಾಲವೂ; ಹಗಲೂ ರಾತ್ರಿಯೂ ನಿಂತುಹೋಗುವುದಿಲ್ಲ.”