Genesis 9:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾವೆಯೊಳಗಿಂದ ಬಂದ ಎಲ್ಲಾ ಪಕ್ಷಿಗಳಿಗೆ, ಎಲ್ಲಾ ಪಶುಗಳಿಗೆ ಮತ್ತು ಪ್ರಾಣಿಗಳಿಗೆ ನಾನು ವಾಗ್ದಾನ ಮಾಡುತ್ತೇನೆ. ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಗೆ ವಾಗ್ದಾನ ಮಾಡುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮೊಂದಿಗೆ ನಾವೆಯಿಂದ ಹೊರಟು ಬಂದ ಪಶು ಪಕ್ಷಿ, ಮೃಗ, ಸಕಲ ಭೂಜಂತುಗಳೊಂದಿಗೂ ನನ್ನ ಒಡಂಬಡಿಕೆಯನ್ನು ಸ್ಥಾಪಿಸುತ್ತೇನೆ.
Kannada BSI Bible 2016
ನಾವೆಯೊಳಗಿಂದ ಹೊರಗೆ ಬಂದ ಎಲ್ಲವುಗಳ ಅಂದರೆ ಭೂಮಿಯ ಎಲ್ಲಾ ಜೀವಿಗಳ ಸಹಿತ ಪಕ್ಷಿಗಳೊಂದಿಗೂ ಪಶುಗಳೊಂದಿಗೂ ಭೂಮಿಯ ಎಲ್ಲಾ ಮೃಗಗಳೊಂದಿಗೂ ನಿಮ್ಮ ಕೂಡ ಇರುವ ಎಲ್ಲಾ ಜೀವಜಂತುಗಳೊಂದಿಗೂ
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ಕೂಡ ನಾವೆಯಿಂದ ಹೊರಟುಬಂದ ಪಶುಪಕ್ಷಿಮೃಗಾದಿ ಸಕಲ ಭೂಜಂತುಗಳನ್ನೂ ಕುರಿತು ಸ್ಥಿರಪ್ರತಿಜ್ಞೆ ಮಾಡುತ್ತೇನೆ;
Kannada Bible (KNCL) BSI 2016
ನಿಮ್ಮ ಕೂಡ ನಾವೆಯಿಂದ ಹೊರಟುಬಂದ ಪ್ರಾಣಿ-ಪಕ್ಷಿ-ಮೃಗಾದಿ ಸಕಲ ಭೂಜಂತುಗಳನ್ನೂ ಕುರಿತು ಒಂದು ಸ್ಥಿರ ಪ್ರತಿಜ್ಞೆಯನ್ನು ಮಾಡುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಜೊತೆ ನಾವೆಯೊಳಗಿಂದ ಹೊರಗೆ ಬಂದ ಎಲ್ಲಾ ಜೀವಿಗಳ ಸಹಿತ ಅಂದರೆ ಪಕ್ಷಿಗಳು, ಪಶುಗಳು, ಕಾಡುಮೃಗಗಳು ಮತ್ತು ಭೂಮಿಯ ಎಲ್ಲಾ ಜೀವಿಗಳೊಂದಿಗೆ ಒಡಂಬಡಿಕೆಯನ್ನು ಸ್ಥಾಪಿಸುತ್ತೇನೆ