Genesis 9:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಈ ಮುಗಿಲುಬಿಲ್ಲನ್ನು ನೋಡುವಾಗ, ನನಗೂ ನಿಮಗೂ ಮತ್ತು ಭೂಮಿಯ ಮೇಲಿರುವ ಎಲ್ಲಾ ಜೀವಿಗಳಿಗೂ ಆಗಿರುವ ಒಡಂಬಡಿಕೆಯನ್ನು ನೆನಪುಮಾಡಿಕೊಳ್ಳುವೆನು. ಜಲಪ್ರಳಯವು ಇನ್ನೆಂದಿಗೂ ಭೂಮಿಯ ಮೇಲಿರುವ ಎಲ್ಲಾ ಜೀವಿಗಳನ್ನು ನಾಶಗೊಳಿಸುವುದಿಲ್ಲ ಎಂಬುದೇ ಈ ಒಡಂಬಡಿಕೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ನಾನು ನಿಮ್ಮನ್ನೂ, ಎಲ್ಲಾ ಜೀವರಾಶಿಗಳನ್ನೂ ಕುರಿತು ಮಾಡಿದ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು. ಇನ್ನು ಮುಂದೆ ನೀರು ಹೆಚ್ಚಿ ಎಲ್ಲಾ ಭೂಜೀವಿಗಳನ್ನು ಹಾಳುಮಾಡುವ ಪ್ರಳಯವಾಗುವುದಿಲ್ಲ.
Kannada BSI Bible 2016
ಆಗ ನಾನು ನನಗೂ ನಿಮಗೂ ದೇಹಗಳಿರುವ ಎಲ್ಲಾ ಜೀವಜಂತುಗಳಿಗೂ ಮಧ್ಯೆ ಇರುವ ನನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು. ಇನ್ನು ಶರೀರಗಳನ್ನೆಲ್ಲಾ ನಾಶಮಾಡುವ ಜಲಪ್ರಳಯವಾ ಗುವದೇ ಇಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ನಾನು ನಿಮ್ಮನ್ನೂ ಎಲ್ಲಾ ಜೀವರಾಶಿಗಳನ್ನೂ ಕುರಿತು ಮಾಡಿದ ಪ್ರತಿಜ್ಞೆಯನ್ನು ಜ್ಞಾಪಕಮಾಡಿಕೊಳ್ಳುವೆನು. ಇನ್ನು ಮುಂದೆ ನೀರು ಹೆಚ್ಚಿ ಎಲ್ಲಾ ಭೂಪ್ರಾಣಿಗಳನ್ನು ಹಾಳುಮಾಡುವ ಪ್ರಳಯವಾಗುವದಿಲ್ಲ.
Kannada Bible (KNCL) BSI 2016
ಆಗ ನಿಮ್ಮನ್ನೂ ಎಲ್ಲ ಜೀವರಾಶಿಗಳನ್ನೂ ಕುರಿತು ನಾನು ಮಾಡಿದ ಪ್ರತಿಜ್ಞೆಯನ್ನು ನೆನೆಸಿಕೊಳ್ಳುತ್ತೇನೆ. ಇನ್ನು ಮುಂದೆ ಜಲ ಹೆಚ್ಚಿ ಭೂಪ್ರಾಣಿಗಳನ್ನೆಲ್ಲಾ ಹಾಳುಮಾಡುವ ಪ್ರಳಯ ಬರುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನಾನು ನನಗೂ ನಿಮಗೂ ಪ್ರತಿಯೊಂದು ಜೀವಿಗಳಿಗೂ ಮಧ್ಯೆಯಿರುವ ನನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು. ಇನ್ನು ಎಲ್ಲಾ ಜೀವಿಗಳನ್ನು ನಾಶಮಾಡುವ ಪ್ರಳಯವಾಗುವುದೇ ಇಲ್ಲ.