Genesis 9:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ದೇವರು ನೋಹನಿಗೆ, “ಭೂಮಿಯ ಮೇಲಿರುವ ಎಲ್ಲಾ ಜೀವಿಗಳೊಡನೆ ನಾನು ಮಾಡಿಕೊಂಡ ಒಡಂಬಡಿಕೆಗೆ ಈ ಮುಗಿಲುಬಿಲ್ಲು ಗುರುತಾಗಿರುವುದು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತು ದೇವರು ನೋಹನಿಗೆ, “ನನಗೂ ಎಲ್ಲಾ ಭೂಜೀವಿಗಳಿಗೂ ಆದ ಒಡಂಬಡಿಕೆಗೆ ಇದೇ ಗುರುತು” ಎಂದು ಹೇಳಿದನು.
Kannada BSI Bible 2016
ದೇವರು ನೋಹನಿಗೆ--ನಾನು ನನಗೂ ಭೂಮಿಯ ಮೇಲಿರುವ ಎಲ್ಲಾ ದೇಹಗಳಿಗೂ ಮಧ್ಯ ದಲ್ಲಿ ಸ್ಥಾಪಿಸಿದ ಒಡಂಬಡಿಕೆಯ ಗುರುತು ಇದೇ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ದೇವರು ನೋಹನಿಗೆ - ನನಗೂ ಎಲ್ಲಾ ಭೂಜೀವಿಗಳಿಗೂ ಆದ ಒಡಂಬಡಿಕೆಗೆ ಇದೇ ಗುರುತು ಎಂದು ಹೇಳಿದನು.
Kannada Bible (KNCL) BSI 2016
ಇದು ಅಲ್ಲದೆ ದೇವರು ನೋಹನಿಗೆ, “ನನಗೂ ಸಮಸ್ತ ಭೂಜೀವಿಗಳಿಗೂ ಆದ ಒಡಂಬಡಿಕೆಗೆ ಇದೇ ಗುರುತು,” ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಂತರ ದೇವರು ನೋಹನಿಗೆ, “ಈ ಮಳೆಬಿಲ್ಲು ನನಗೂ ಭೂಮಿಯ ಮೇಲಿರುವ ಎಲ್ಲಾ ಜೀವಿಗಳಿಗೂ ಮಧ್ಯದಲ್ಲಿ ಸ್ಥಾಪಿಸಿದ ಒಡಂಬಡಿಕೆಯ ಗುರುತಾಗಿದೆ,” ಎಂದು ಹೇಳಿದರು.