Genesis 9:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಭೂಮಿಯ ಮೇಲಿರುವ ಪ್ರತಿಯೊಂದು ಪ್ರಾಣಿಯೂ ನಿಮಗೆ ಹೆದರಿ ಭಯಪಡುವುದು; ಆಕಾಶದಲ್ಲಿ ಹಾರಾಡುವ ಪ್ರತಿಯೊಂದು ಪಕ್ಷಿಯೂ ನಿಮಗೆ ಹೆದರಿ ಭಯಪಡುವುದು; ನೆಲದ ಮೇಲೆ ಹರಿದಾಡುವ ಪ್ರತಿಯೊಂದು ಕ್ರಿಮಿಯೂ ಮತ್ತು ಸಮುದ್ರದಲ್ಲಿರುವ ಪ್ರತಿಯೊಂದು ಮೀನೂ ನಿಮಗೆ ಹೆದರಿ ಭಯಪಡುವುದು. ನೀವು ಅವುಗಳಿಗೆಲ್ಲಾ ಒಡೆಯರಾಗಿರುತ್ತೀರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಭೂಮಿಯ ಮೇಲಿರುವ ಎಲ್ಲಾ ಮೃಗಗಳೂ, ಆಕಾಶದ ಎಲ್ಲಾ ಪಕ್ಷಿಗಳೂ, ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳೂ, ಸಮುದ್ರದ ಮೀನುಗಳೂ ನಿಮಗೆ ಹೆದರುವವು. ನಾನು ಅವುಗಳನ್ನೆಲ್ಲಾ ನಿಮ್ಮ ಸ್ವಾಧೀನಕ್ಕೆ ಕೊಟ್ಟಿದ್ದೇನೆ.
Kannada BSI Bible 2016
ಭೂಮಿಯ ಮೇಲಿರುವ ಎಲ್ಲಾ ಮೃಗಗಳ ಮೇಲೆಯೂ ಆಕಾಶದ ಎಲ್ಲಾ ಪಕ್ಷಿಗಳ ಮೇಲೆಯೂ ಭೂಮಿಯ ಮೇಲೆ ಹರಿದಾಡುವವು ಗಳೆಲ್ಲವುಗಳ ಮೇಲೆಯೂ ಸಮುದ್ರದ ಎಲ್ಲಾ ವಿಾನುಗಳ ಮೇಲೆಯೂ ನಿಮ್ಮ ಭಯವು ಮತ್ತು ನಿಮ್ಮ ಹೆದರಿಕೆಯು ಇರುವದು; ನಿಮ್ಮ ಕೈಗಳಲ್ಲಿ ಅವು ಕೊಡಲ್ಪಟ್ಟಿವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಭೂವಿುಯ ಮೇಲಿರುವ ಎಲ್ಲಾ ಮೃಗಗಳೂ ಆಕಾಶದ ಎಲ್ಲಾ ಪಕ್ಷಿಗಳೂ ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿವಿುಗಳೂ ಸಮುದ್ರದ ಮೀನುಗಳೂ ನಿಮಗೆ ಬೆದರಿ ಅಂಜಿಕೊಳ್ಳುವವು; ನಾನು ಅವುಗಳನ್ನೆಲ್ಲಾ ನಿಮ್ಮ ಸ್ವಾಧೀನಕ್ಕೆ ಕೊಟ್ಟಿದ್ದೇನೆ.
Kannada Bible (KNCL) BSI 2016
ಭೂಮಿಯ ಮೇಲಿರುವ ಎಲ್ಲ ಪ್ರಾಣಿಗಳೂ ಆಕಾಶದ ಎಲ್ಲ ಪಕ್ಷಿಗಳೂ ನೆಲದ ಮೇಲೆ ಹರಿದಾಡುವ ಎಲ್ಲ ಕ್ರಿಮಿಕೀಟಗಳೂ ಸಮುದ್ರದ ಎಲ್ಲ ಮೀನುಗಳೂ ನಿಮಗೆ ಹೆದರಿ ಬೆದರುವುವು. ಅವುಗಳನ್ನೆಲ್ಲ ನಿಮ್ಮ ಸ್ವಾಧೀನಕ್ಕೆ ಕೊಟ್ಟಿದ್ದೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಭೂಮಿಯ ಎಲ್ಲಾ ಮೃಗಗಳ ಮೇಲೆಯೂ ಆಕಾಶದ ಎಲ್ಲಾ ಪಕ್ಷಿಗಳ ಮೇಲೆಯೂ ಭೂಮಿಯ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಕೀಟಗಳ ಮೇಲೆಯೂ ಸಮುದ್ರದ ಎಲ್ಲಾ ಮೀನುಗಳ ಮೇಲೆಯೂ ನಿಮ್ಮ ಭಯ ಬೆದರಿಕೆಯು ಇರುವುದು. ನಿಮ್ಮ ಕೈಗೆ ಅವು ಕೊಡಲಾಗಿವೆ.