Genesis 9:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾವನಾದರೂ ನಿಮ್ಮ ಜೀವಹತ್ಯೆ ಮಾಡಿದರೆ, ನಾನು ಅವನ ಜೀವವನ್ನು ತೆಗೆಯುವೆನು. ಯಾವ ಪ್ರಾಣಿಯಾದರೂ ಮನುಷ್ಯನನ್ನು ಕೊಂದರೆ, ನಾನು ಆ ಪ್ರಾಣಿಯ ಪ್ರಾಣವನ್ನು ತೆಗೆಯುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ನಿಮ್ಮ ರಕ್ತ ಸುರಿಸಿ ಜೀವ ತೆಗೆಯುವವನಿಗೆ ಮುಯ್ಯಿತೀರಿಸುವೆನು. ಮೃಗವಾಗಿದ್ದರೆ, ಅದಕ್ಕೂ ಮುಯ್ಯಿತೀರಿಸುವೆನು. ಮನುಷ್ಯನಾಗಿದ್ದರೆ, ಹತನಾದವನು ಅವನ ಸಹೋದರನಾದುದರಿಂದ ಅವನಿಗೂ ಮುಯ್ಯಿ ತೀರಿಸುವೆನು. ನರಹತ್ಯವು ಸಹೋದರ ಹತ್ಯವಲ್ಲವೇ?
Kannada BSI Bible 2016
ಇದಲ್ಲದೆ ನಿಮ್ಮ ಪ್ರಾಣಗಳಿಗೋಸ್ಕರ ನಿಮ್ಮ ರಕ್ತವನ್ನು ನಾನು ಖಂಡಿತವಾಗಿಯೂ ವಿಚಾರಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ನಿಮ್ಮ ರಕ್ತವನ್ನು ಸುರಿಸಿ ಜೀವತೆಗೆಯುವವರಿಗೆ ಮುಯ್ಯಿತೀರಿಸುವೆನು. ಮೃಗವಾಗಿದ್ದರೆ ಅದಕ್ಕೂ ಮನುಷ್ಯನಾಗಿದ್ದರೆ, ಹತವಾದವನು ಅವನ ಸಹೋದರನಾಗಿರುವದರಿಂದ, ಅವನಿಗೂ ಮುಯ್ಯಿ ತೀರಿಸುವೆನೆಂದು ತಿಳಿದುಕೊಳ್ಳಿರಿ.
Kannada Bible (KNCL) BSI 2016
ನಿಮ್ಮ ರಕ್ತಸುರಿಸಿ ಪ್ರಾಣತೆಗೆಯುವವರೆಗೆ ಮುಯ್ಯಿತೀರಿಸುವೆನು - ಮೃಗವಾಗಿದ್ದರೆ ಅದಕ್ಕೂ, ಮನುಷ್ಯನಾಗಿದ್ದರೆ, ಹತನಾದವನು ಅವನ ಸಹೋದರನಾದುದರಿಂದ ಅವನಿಗೂ ಮುಯ್ಯಿತೀರಿಸುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ರಕ್ತ ಸುರಿಸಿ, ಪ್ರಾಣ ತೆಗೆಯುವವರಿಗೆ, ಮುಯ್ಯಿತೀರಿಸುವೆನು, ಮೃಗವಾಗಿದ್ದರೆ ಅದಕ್ಕೂ ಮುಯ್ಯಿತೀರಿಸುವೆನು. ಮನುಷ್ಯನಾಗಿದ್ದರೆ, ಹತನಾದವನು ಇನ್ನೊಬ್ಬ ಮನುಷ್ಯನಾದುದರಿಂದ ಹತಿಸಿದವನಿಗೂ ಮುಯ್ಯಿತೀರಿಸುವೆನು.