Habakkuk 1:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಇತರ ಜನಾಂಗದ ಅರಸರನ್ನು ಬಾಬಿಲೋನಿನ ಸೈನಿಕರು ಗೇಲಿ ಮಾಡುತ್ತಾರೆ. ಪರದೇಶದ ಅರಸರು ಅವರಿಗೆ ಹಾಸ್ಯಾಸ್ಪದವಾಗಿರುತ್ತಾರೆ. ಕೋಟೆಕೊತ್ತಲುಗಳಿರುವ ನಗರವನ್ನು ನೋಡಿ ಅವರು ನಗಾಡುವರು. ಆ ಸೈನಿಕರು ಕೋಟೆಯ ಗೋಡೆಯ ತನಕ ಮಣ್ಣಿನದಿಬ್ಬವನ್ನೇರಿಸಿ, ಸುಲಭವಾಗಿ ಪಟ್ಟಣಗಳನ್ನು ವಶಮಾಡಿಕೊಳ್ಳುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಅರಸರನ್ನು ಧಿಕ್ಕರಿಸಿ ಅಪಹಾಸ್ಯ ಮಾಡುವರು. ಸರದಾರರು ಅಧಿಪತಿಗಳು ಅವರ ಪರಿಹಾಸ್ಯಕ್ಕೆ ಗುರಿಯಾಗುವರು. ಒಂದೊಂದು ಕೋಟೆಯನ್ನೂ ಆಕ್ರಮಿಸಿ ಧೂಳಿಪಟ ಮಾಡುವರು.
Kannada BSI Bible 2016
ಅವರು ಅರಸರನ್ನು ಧಿಕ್ಕರಿಸುವರು; ಪ್ರಧಾನರು ಅವರಿಗೆ ಪರಿಹಾಸ್ಯ ಮಾಡುವರು. ಕೋಟೆಗಳಿಗೆಲ್ಲಾ ಕುಚೋದ್ಯ ಮಾಡು ವರು. ಮಣ್ಣನ್ನು ಕುಪ್ಪೆಮಾಡಿ ಅದನ್ನು ಹಿಡಿಯುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸರನ್ನು ಧಿಕ್ಕರಿಸುವರು; ಸರದಾರರು ಅವರ ಹಾಸ್ಯಕ್ಕೆ ಗುರಿಯಾಗುವರು. ಒಂದೊಂದು ಕೋಟೆಯನ್ನೂ ತಾತ್ಸಾರಮಾಡಿ ದೂಳದಿಬ್ಬಹಾಕಿ ಆಕ್ರವಿುಸುವರು.
Kannada Bible (KNCL) BSI 2016
“ಅವರು ಅರಸರನ್ನು ಅಪಹಾಸ್ಯಮಾಡುವರು; ಅಧಿಪತಿಗಳನ್ನು ಪರಿಹಾಸ್ಯಕ್ಕೆ ಗುರಿಮಾಡುವರು. ಕೋಟೆಗಳನ್ನು ಧೂಳೀಪಟ ಮಾಡುವರು. ಮಣ್ಣುಗುಡ್ಡೆ ಹಾಕಿ ಆಕ್ರಮಿಸಿಕೊಳ್ಳುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ ಅರಸನನ್ನು ಧಿಕ್ಕರಿಸುವರು; ಪ್ರಧಾನರು ಅವರನ್ನು ಪರಿಹಾಸ್ಯ ಮಾಡುವರು; ಕೋಟೆಗಳಿಗೆಲ್ಲಾ ಕುಚೋದ್ಯ ಮಾಡುವರು; ಮಣ್ಣಿನ ದಿನ್ನೆಗಳನ್ನು ಮಾಡಿ, ಅವುಗಳನ್ನು ಹಿಡಿಯುವರು.