Habakkuk 1:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವೆಲ್ಲವನ್ನು ಗಾಳ, ಬಲೆಗಳಿಂದ ವೈರಿಯು ಹಿಡಿಯುತ್ತಾನೆ. ಬಲೆಯಲ್ಲಿ ಅವುಗಳನ್ನು ವೈರಿಯು ಹಿಡಿದು ಎಳೆಯುವನು. ತಾನು ಹಿಡಿದನೆಂದು ವೈರಿಯು ಹರ್ಷಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಲಿದಾಡುತ್ತಾ ಶತ್ರುಗಳು ನಮ್ಮನ್ನು ಗಾಳಗಳಿಂದ ಹಿಡಿದು ತಮ್ಮ ಬಲೆಗಳಲ್ಲಿ ರಾಶಿ ರಾಶಿಯಾಗಿ ಬಾಚಿಕೊಂಡು ಹೋಗಬೇಕೋ?
Kannada BSI Bible 2016
ಅವರನ್ನೆಲ್ಲಾ ಗಾಳದಿಂದ ಎತ್ತಿ ತಮ್ಮ ಬಲೆಯಿಂದ ಅವರನ್ನು ಹಿಡಿದು ತಮ್ಮ ಜಾಲದಿಂದ ಅವರನ್ನು ಕೂಡಿಸುತ್ತಾರೆ; ಆದದರಿಂದ ಸಂತೋಷಿಸಿ ಉಲ್ಲಾಸ ಪಡುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಹಾ, ಅವರನ್ನೆಲ್ಲಾ ತನ್ನ ಗಾಳದಿಂದ ಮೇಲಕ್ಕೆಳೆಯುತ್ತಾನೆ, ತನ್ನ ಬಲೆಯಿಂದ ಬಾಚುತ್ತಾನೆ, ತನ್ನ ಜಾಲದಲ್ಲಿ ಗುಡ್ಡೆ ಮಾಡುತ್ತಾನೆ; ಇದಕ್ಕೆ ಹಿಗ್ಗುತ್ತಾನೆ, ಹೆಚ್ಚಳಪಡುತ್ತಾನೆ;
Kannada Bible (KNCL) BSI 2016
ಈ ಕಾರಣ ಆ ಬಾಬಿಲೋನಿಯರು ಮಾನವರನ್ನು ಗಾಳದಿಂದ ಸೆಳೆದುಕೊಳ್ಳುತ್ತಾರೆ; ಬಲೆಯಿಂದ ಬಾಚಿಕೊಳ್ಳುತ್ತಾರೆ; ತಮ್ಮ ಜಾಲದಲ್ಲಿ ರಾಶಿಹಾಕಿಕೊಳ್ಳುತ್ತಾರೆ; ಹಿರಿಹಿರಿ ಹಿಗ್ಗುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದುಷ್ಟ ವೈರಿಯು ಅವುಗಳನ್ನು ಗಾಳದಿಂದ ಎತ್ತಿ, ತನ್ನ ಬಲೆಯಿಂದ ಅವುಗಳನ್ನು ಹಿಡಿದು, ತನ್ನ ಜಾಲದಿಂದ ಅವುಗಳನ್ನು ಕೂಡಿಸಿಡುತ್ತಾನೆ. ಅವನು ಹಿಗ್ಗುತ್ತಾನೆ, ಸಂತೋಷಪಡುತ್ತಾನೆ.