Habakkuk 1:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನ ಬಲೆಗಳು ಅವನು ಧನಿಕನಂತೆ ಜೀವಿಸಲು ಸಹಾಯ ಮಾಡುವವು. ಅವನು ಒಳ್ಳೆಯ ಆಹಾರವನ್ನು ಉಣ್ಣುವನು. ಅದಕ್ಕೆ ವೈರಿಯು ತನ್ನ ಬಲೆಯನ್ನು ಆರಾಧಿಸುವನು. ಅವನು ಯಜ್ಞವನ್ನರ್ಪಿಸಿ ಧೂಪ ಹಾಕುವನು. ಬಲೆಯನ್ನು ಗೌರವಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಮ್ಮ ಬಲೆಗಳಿಗೆ ಆರಾಧನೆ ಮಾಡುತ್ತಾ ಬಲಿ ಕೊಡುತ್ತಾರೆ, ತಮ್ಮ ಜಾಲಗಳ ಎದುರು ಧೂಪಹಾಕುತ್ತಾರೆ; ಅವುಗಳ ಮೂಲಕವೇ ಅವರ ಭೋಜನವು ಪುಷ್ಟಿಯಾಯಿತು, ಅವರ ಆಹಾರವು ರುಚಿ ಎಂದು ಹೇಳುತ್ತಾರೆ.
Kannada BSI Bible 2016
ತಮ್ಮ ಬಲೆಗೆ ಬಲಿ ಅರ್ಪಿಸಿ ತಮ್ಮ ಜಾಲಕ್ಕೆ ಧೂಪವನ್ನು ಸುಡುತ್ತಾರೆ; ಇವುಗಳಿಂದ ಅವರ ಪಾಲು ಕೊಬ್ಬಾಗಿಯೂ ಅವರ ಆಹಾರ ಪುಷ್ಟಿ ಯುಳ್ಳದ್ದಾಗಿಯೂ ಇದೆ.ಹೀಗಿರುವದರಿಂದ ಅವರು ತಮ್ಮ ಬಲೆಯನ್ನು ಬರಿದುಮಾಡಿ ನಿತ್ಯವಾಗಿ ಜನಾಂಗ ಗಳನ್ನು ಕರುಣಿಸದೆ ಸದಾ ಸಂಹರಿಸುತ್ತಿರಬೇಕೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ತನ್ನ ಬಲೆಗೆ ಬಲಿಕೊಡುತ್ತಾನೆ, ತನ್ನ ಜಾಲಕ್ಕೆ ಧೂಪಹಾಕುತ್ತಾನೆ; ಅವುಗಳ ಮೂಲಕವೇ ಅವನ ಭೋಜನವು ಪುಷ್ಟಿ, ಅವನ ಆಹಾರವು ರುಚಿ.
Kannada Bible (KNCL) BSI 2016
ತಮ್ಮ ಬಲೆಗೆ ಬಲಿಕೊಡುತ್ತಾರೆ; ಧೂಪ ಹಾಕುತ್ತಾರೆ. ಅವುಗಳ ಮೂಲಕವೇ ಅವರ ಜೀವನ ಗಟ್ಟಿ; ಅವರ ಭೋಜನ ಪುಷ್ಟಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ತಮ್ಮ ಬಲೆಗೆ ಬಲಿ ಅರ್ಪಿಸಿ, ತಮ್ಮ ಜಾಲಕ್ಕೆ ಧೂಪವನ್ನು ಸುಡುತ್ತಾರೆ. ಏಕೆಂದರೆ ಇವುಗಳಿಂದ ಅವರ ಭೋಜನ ಪುಷ್ಟಿಯಾಗಿಯೂ, ಅವರ ಆಹಾರ ರುಚಿಯುಳ್ಳದ್ದಾಗಿಯೂ ಇದೆ.