Habakkuk 1:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನೇ, ನಾನು ನಿನ್ನಿಂದ ಸಹಾಯವನ್ನು ಕೇಳುತ್ತಲೇ ಇದ್ದೇನೆ. ನನ್ನ ಮೊರೆಯನ್ನು ಯಾವಾಗ ಕೇಳುವೆ? ನಾನು ಹಿಂಸೆಯ ವಿಷಯವಾಗಿ ನಿನ್ನನ್ನು ಕೂಗಿದರೂ ನೀನು ಏನೂ ಮಾಡಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನೇ, ನಾನು ಎಷ್ಟು ಕಾಲ ನಿನಗೆ ಸಹಾಯಕ್ಕಾಗಿ ಮೊರೆಯಿಡುತ್ತಿರಬೇಕು? ನೀನು ಎಷ್ಟು ಕಾಲ ಕೇಳದೇ ಇರುವಿ? ಹಿಂಸೆ, ಹಿಂಸೆ ಎಂದು ನಿನ್ನನ್ನು ಕೂಗಿಕೊಂಡರೂ ರಕ್ಷಿಸದೇ ಇರುವಿ.
Kannada BSI Bible 2016
ಓ ಕರ್ತನೇ, ನಾನು ನಿನಗೆ ಮೊರೆಯಿಟ್ಟರೂ ಎಷ್ಟರ ವರೆಗೆ ನೀನು ಕೇಳದೇ ಇರುವಿ? ಹಿಂಸೆ ಹಿಂಸೆ ಎಂದು ನಿನಗೆ ಕೂಗುತ್ತೇನೆ; ಆದರೆ ನೀನು ರಕ್ಷಿಸುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನೇ, ನಾನು ಮೊರೆಯಿಡುತ್ತಿದ್ದರೂ ನೀನು ಎಷ್ಟು ಕಾಲ ಕೇಳದೇ ಇರುವಿ? ಹಿಂಸೆ, ಹಿಂಸೆ ಎಂದು ನಿನ್ನನ್ನು ಕೂಗಿಕೊಂಡರೂ ರಕ್ಷಿಸದೆ ಇರುವಿ.
Kannada Bible (KNCL) BSI 2016
ನಾನೆಷ್ಟು ಕಾಲ ಸರ್ವೇಶ್ವರಾ, ಮೊರೆ ಇಡುತ್ತಿರಬೇಕು ನಿನಗೆ? ನೀನೆಷ್ಟು ಕಾಲ ಸುಮ್ಮನಿರುವೆ ಕಿವಿಗೊಡದೆ ನನಗೆ? ಹಿಂಸೆಯಾಗುತ್ತಿದೆಯೆಂದು ನಾ ಕೂಗಿದೆ; ಆದರೂ ನೀ ಸುಮ್ಮನಿರುವೆ, ರಕ್ಷಣೆ ನೀಡದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರೇ, ನಾನು ಎಷ್ಟು ಕಾಲ ಸಹಾಯಕ್ಕಾಗಿ ಮೊರೆಯಿಡಬೇಕು. ನೀವು ನನ್ನ ಮೊರೆಗೆ ಎಷ್ಟು ಕಾಲ ಕಿವಿಗೊಡದಿರುವಿರಿ. “ಹಿಂಸೆಯಾಗುತ್ತಿದೆ,” ಎಂದು ಕೂಗುತ್ತಿದ್ದೇನೆ, ಆದರೂ ನೀವು ರಕ್ಷಿಸುವುದಿಲ್ಲ.