Habakkuk 1:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜನರು ವಸ್ತುಗಳನ್ನು ಕದ್ದುಕೊಂಡು ಇತರರನ್ನು ಗಾಯಗೊಳಿಸುತ್ತಿದ್ದಾರೆ. ಜನರು ಜಗಳ ಮಾಡುತ್ತಾ ಕಾದಾಡುತ್ತಿದ್ದಾರೆ. ಇಂಥಾ ಭಯಂಕರ ಸಂಗತಿಗಳನ್ನು ನೋಡುವಂತೆ ಯಾಕೆ ಮಾಡುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೇಡನ್ನೇ ನನ್ನ ಕಣ್ಣಿಗೆ ಏಕೆ ಕಾಣಿಸುವಂತೆ ಮಾಡಿದ್ದಿ? ಕಷ್ಟವನ್ನೇಕೆ ಅನುಭವಿಸುವಂತೆ ಮಾಡಿರುವೆ? ಹಿಂಸೆಬಾಧೆಗಳು ನನ್ನ ಕಣ್ಣೆದುರಿಗೆ ಇದ್ದೇ ಇವೆ; ಜಗಳವಾಗುತ್ತಿದೆ ವ್ಯಾಜ್ಯವೇಳುತ್ತಿದೆ.
Kannada BSI Bible 2016
ಯಾಕೆ ನನಗೆ ಅಪರಾಧವನ್ನು ತೋರಿಸಿ ಕಷ್ಟವನ್ನು ನೋಡಮಾಡುತ್ತೀ? ಸೂರೆಯೂ ಹಿಂಸೆಯೂ ನನ್ನ ಮುಂದೆ ಅವೆ; ಜಗಳವನ್ನೂ ತರ್ಕವನ್ನೂ ಎಬ್ಬಿಸುವವರು ಇದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೇಡನ್ನು ನನ್ನ ಕಣ್ಣಿಗೆ ಏಕೆ ಬೀಳಿಸುತ್ತಿದ್ದೀ? ಕಷ್ಟವನ್ನೇಕೆ ನನಗೆ ತೋರಿಸುತ್ತಿದ್ದೀ? ಹಿಂಸೆಬಾಧೆಗಳು ನನ್ನ ಕಣ್ಣೆದುರಿಗೆ ಇದ್ದೇ ಇವೆ; ಜಗಳವಾಗುತ್ತಿದೆ, ವ್ಯಾಜ್ಯವೇಳುತ್ತಿದೆ.
Kannada Bible (KNCL) BSI 2016
ಕೇಡನ್ನು ನಾ ನೋಡುವಂತೆ ಮಾಡಿದೆಯೇಕೆ? ಕಷ್ಟವನ್ನು ನಾ ಕಾಣುವಂತೆ ಮಾಡಿದೆಯೇಕೆ? ಹಿಂಸೆಬಾಧೆಗಳು ಇವೆ ನನ್ನ ಕಣ್ಣ ಮುಂದೆ. ಇಗೋ, ಜಗಳ ನಡೆಯುತಿದೆ, ವ್ಯಾಜ್ಯವೇಳುತಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನ್ಯಾಯವನ್ನು ನಾನು ನೋಡುವಂತೆ ಏಕೆ ಮಾಡುತ್ತೀರಿ? ತಪ್ಪನ್ನು ಏಕೆ ಸಹಿಸುತ್ತೀರಿ? ನಾಶವೂ ಹಿಂಸೆಯೂ ನನ್ನ ಮುಂದೆ ಇವೆ. ಹೋರಾಟವೂ ಒಡುಕೂ ಹೆಚ್ಚುತ್ತಲಿವೆ.