Habakkuk 1:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ಬಯಸುವುದು ಯುದ್ಧವೊಂದನ್ನೇ. ಅವರ ಸೈನ್ಯವು ಮರುಭೂಮಿಯ ಮೇಲೆ ಬೀಸುವ ಗಾಳಿಯ ತರಹ ವೇಗವಾಗಿ ಸಂಚರಿಸುವದು. ಮತ್ತು ಬಾಬಿಲೋನಿನ ಸೈನಿಕರು ಮರಳಿನಷ್ಟು ಅಸಂಖ್ಯಾತ ಜನರನ್ನು ಸೆರೆಹಿಡಿಯುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಿಂಸೆ, ಬಾಧೆಯನ್ನು ಗುರಿಯಾಗಿಟ್ಟುಕೊಂಡೆ ಮುನ್ನುಗ್ಗಿ ಬರುವರು. ಜನರನ್ನು ಮರಳಿನಂತೆ ಲೆಕ್ಕವಿಲ್ಲದಷ್ಟು ಸೆರೆಹಿಡಿದು ಗುಂಪು ಕೂಡಿಸುವರು.
Kannada BSI Bible 2016
ಅವರೆಲ್ಲರು ಹಿಂಸಿಸುವದಕ್ಕೆ ಬರುವರು; ಅವರ ಮುಖಗಳು ಮೂಡಣ ಗಾಳಿ ಯಂತೆಯೇ ತಿಂದುಬಿಡುವವು; ಸೆರೆಯವರನ್ನು ಮರ ಳಿನ ಹಾಗೆ ಕೂಡಿಸುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಲ್ಲರೂ ಬಾಧಿಸಲು ಮುಖವನ್ನು ಮುಂದಕ್ಕೆ ಚಾಚಿಕೊಂಡು ನುಗ್ಗುವರು; ಜನರನ್ನು ಉಸುಬಿನಂತೆ ಲೆಕ್ಕವಿಲ್ಲದಷ್ಟು ಸೆರೆಹಿಡಿದು ಗುಂಪುಕೂಡಿಸುವರು.
Kannada Bible (KNCL) BSI 2016
ಹಿಂಸೆ ಬಾಧೆಯನ್ನು ಗುರಿಯಾಗಿ ಇಟ್ಟುಕೊಂಡೇ ಮುನ್ನುಗ್ಗಿಬರುವರು. ಮರಳಿನ ಕಣಗಳಂತೆ ಲೆಕ್ಕವಿಲ್ಲದಷ್ಟು ಜನರನ್ನು ಸೆರೆ ಹಿಡಿಯುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರೆಲ್ಲರು ಹಿಂಸಿಸುವುದಕ್ಕೆ ಬರುವರು; ಅವರ ಸಮೂಹ, ಮರುಭೂಮಿಯ ಗಾಳಿಯಂತೆಯೇ ಮುಂದೆ ಬರುವುದು; ಸೆರೆಯವರನ್ನು ಮರಳಿನ ಹಾಗೆ ಕೂಡಿಸುವರು.