Habakkuk 2:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನಾನು ಕಾವಲುಗಾರನಂತೆ ನಿಂತುಕೊಂಡು ಗಮನಿಸುವೆನು. ಯೆಹೋವನು ನನಗೆ ಏನನ್ನುವನೋ ಎಂದು ನಾನು ನಿರೀಕ್ಷಿಸುತ್ತಿರುವೆನು. ಆತನು ನನ್ನ ಪ್ರಶ್ನೆಗಳಿಗೆ ಹೇಗೆ ಉತ್ತರಿಸುವನೆಂಬುದನ್ನು ತಾಳ್ಮೆಯಿಂದ ಗಮನಿಸುವೆನು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಕೋವರದಲ್ಲಿ ನಿಂತುಕೊಳ್ಳುವೆನು. ಬುರುಜಿನ ಮೇಲೆ ನೆಲೆಯಾಗಿರುವೆನು. ಯೆಹೋವನು ನನಗೆ ಏನು ಹೇಳುವನೋ ನನ್ನ ಆಕ್ಷೇಪಣೆಯನ್ನು ನಿವಾರಿಸಿಕೊಳ್ಳಲು ಯಾವ ಉತ್ತರ ಕೊಡಬೇಕೋ ಎಂದು ಎದುರುನೋಡುವೆನು ಅಂದುಕೊಂಡನು.
Kannada BSI Bible 2016
ನನ್ನ ಕಾವಲಲ್ಲಿ ನಿಂತು ಗೋಪುರದ ಮೇಲೆ ನೆಲೆಯಾಗಿದ್ದು ಆತನು ನನಗೆ ಏನು ಹೇಳುವನೋ, ನನ್ನ ತರ್ಕದ ವಿಷಯ ಏನು ಉತ್ತರ ಕೊಡಬೇಕೋ ನೋಡುವದಕ್ಕೆ ಕಾದುಕೊಂಡಿರುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಕೋವರದಲ್ಲಿ ನಿಂತುಕೊಳ್ಳುವೆನು, ಬುರುಜಿನ ಮೇಲೆ ನೆಲೆಯಾಗಿರುವೆನು, ಯೆಹೋವನು ನನಗೆ ಏನು ಹೇಳುವನೋ, ನನ್ನ ಆಕ್ಷೇಪಣೆಯನ್ನು ನಿವಾರಿಸಿಕೊಳ್ಳಲು ಯಾವ ಉತ್ತರಕೊಡಬೇಕೋ ಎಂದು ಎದುರು ನೋಡುವೆನು [ಅಂದುಕೊಂಡೆನು].
Kannada Bible (KNCL) BSI 2016
“ನಾನು ಕಾವಲುಗಾರನಾಗಿ ನಿಲ್ಲುವೆನು. ಕಾವಲುಗೋಪುರವನ್ನೇ ಹತ್ತಿ ನಿಂತುಕೊಳ್ಳುವೆನು. ಸರ್ವೇಶ್ವರ ನನಗೆ ಏನು ಹೇಳುವರೋ, ಯಾವ ಉತ್ತರ ಕೊಡುವರೋ, ಎಂದು ಎದುರುನೋಡುವೆನು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಕಾವಲುಗಾರನಾಗಿ ನಿಲ್ಲುವೆನು. ಕಾವಲು ಗೋಪುರವನ್ನೇ ಹತ್ತಿ ನಿಂತುಕೊಳ್ಳುವೆನು. ಯೆಹೋವ ದೇವರು ನನಗೆ ಏನು ಹೇಳುವರೋ, ಯಾವ ಉತ್ತರ ಕೊಡುವರೋ, ಎಂದು ಎದುರು ನೋಡುವೆನು.