Habakkuk 2:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತಾನು ಸಿಟ್ಟುಗೊಂಡು ಇತರರು ಸಂಕಟಪಡುವಂತೆ ಮಾಡುವವನಿಗೆ ಬಹಳ ಕೇಡು ಉಂಟಾಗುವದು. ಸಿಟ್ಟಿನ ಭರದಲ್ಲಿ ಆ ಮನುಷ್ಯನು ಇತರ ಜನರನ್ನು ನೆಲಕ್ಕೆ ಅಪ್ಪಳಿಸಿಬಿಡುವನು. ಅವನು ಅವರನ್ನು ಅಮಲೇರಿದವರಂತೆಯೂ ಬೆತ್ತಲೆಯಾಗಿರುವವರಂತೆಯೂ ಪರಿಗಣಿಸುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
‘ನಿನ್ನ ರೋಷವನ್ನು ಪಾನಕಕ್ಕೆ ಬೆರಸಿ ನಿನ್ನ ನೆರೆಯವನಿಗೆ ಕುಡಿಸಿ, ಅವನ ಬೆತ್ತಲೆತನವನ್ನು ನೋಡಬೇಕೆಂದು ಅವರನ್ನು ಅಮಲೇರಿಸಿದವನೇ, ನಿನ್ನ ಗತಿಯನ್ನು ಏನು ಹೇಳಲಿ!
Kannada BSI Bible 2016
ತನ್ನ ನೆರೆಯವ ನಿಗೆ ಕುಡಿಯಕೊಟ್ಟು ನಿನ್ನ ಬುಟ್ಟಿಯನ್ನು ಹೊಯಿದು ಅವರ ಬೆತ್ತಲೆತನವನ್ನು ನೋಡುವ ಹಾಗೆ ಅಮಲೇರಿ ಸುವವನಿಗೆ ಅಯ್ಯೋ!
Kannada BSI JV (ಕನ್ನಡ ಸತ್ಯವೇದವು J.V. (BSI))
ಅಯ್ಯೋ, ನಿನ್ನ ರೋಷವನ್ನು ಪಾನಕಕ್ಕೆ ಬೆರಸಿ ನಿನ್ನ ನೆರೆಯವರಿಗೆ ಕುಡಿಸಿ ಅವರ ಬೆತ್ತಲೆತನವನ್ನು ನೋಡಬೇಕೆಂದು ಅವರನ್ನು ಅಮಲೇರಿಸಿದವನೇ, ನಿನ್ನ ಗತಿಯನ್ನು ಏನು ಹೇಳಲಿ!
Kannada Bible (KNCL) BSI 2016
ನಿನ್ನ ರೋಷವನ್ನು ಮಧುಪಾನಕ್ಕೆ ಬೆರಸಿ, ಅದರಿಂದ ನಿನ್ನ ನೆರೆಯವರನ್ನು ಮತ್ತರಾಗಿಸಿ, ಅವರ ಬೆತ್ತಲೆತನವನ್ನು ನೋಡಬೇಕೆಂದಿರುವ ನಿನಗೆ ಧಿಕ್ಕಾರ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ರೋಷವನ್ನು ಪಾನಕಕ್ಕೆ ಬೆರಸಿ, ನಿನ್ನ ನೆರೆಯವರಿಗೆ ಕುಡಿಸಿ, ಅವರ ಬೆತ್ತಲೆತನವನ್ನು ನೋಡಬೇಕೆಂದು ಅವರನ್ನು ಅಮಲೇರಿಸಿದವನೇ, ಅಯ್ಯೋ, ನಿನ್ನ ಗತಿಯನ್ನು ಏನು ಹೇಳಲಿ!