Habakkuk 2:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಮನುಷ್ಯನ ಸುಳ್ಳು ದೇವರು ಅವನಿಗೆ ಸಹಾಯ ಮಾಡಲಾರದು. ಯಾಕೆಂದರೆ ಅದು ಒಬ್ಬನು ಲೋಹದಿಂದ ಮಾಡಿದ ಕೇವಲ ವಿಗ್ರಹವಷ್ಟೆ. ಅದು ಕೇವಲ ಜಡಮೂರ್ತಿ. ಅದನ್ನು ಮಾಡಿದವನು, ಅದು ಅವನಿಗೆ ಸಹಾಯ ಮಾಡುವದೆಂದು ಯೋಚಿಸುವದು ಶುದ್ಧ ಮೂರ್ಖತನ. ಆ ಮೂರ್ತಿಯು ಮಾತಾಡುವೂದೂ ಇಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ವಿಗ್ರಹ ಕೆತ್ತುವವನ ವಿಗ್ರಹವಾಗಲಿ ಅಥವಾ ಎರಕದಿಂದ ಮಾಡಿದ ಗೊಂಬೆಗಳಿಂದಾಗಲಿ ಲಾಭವೇನು? ಹಾಗೆ ದೇವರುಗಳನ್ನು ರೂಪಿಸುವವರು ಸುಳ್ಳನ್ನು ಬಿತ್ತುವವರು; ಏಕೆಂದರೆ, ಆ ನಿರ್ಜೀವ ವಿಗ್ರಹವನ್ನು ನಿರ್ಮಿಸಿದವನು ತನ್ನ ಕೈಕೆಲಸದ ಮೇಲೆಯೇ ಭರವಸೆ ಇಟ್ಟಿದ್ದಾನೆ.’
Kannada BSI Bible 2016
ಅದನ್ನು ಕೆತ್ತಿ ರೂಪಿಸಿದವನ ಕೆತ್ತಿದ ವಿಗ್ರಹದಿಂದ ಪ್ರಯೋಜನವೇನು? ಸುಳ್ಳನ್ನು ಬೋಧಿಸುವಂಥ, ಅದನ್ನು ರೂಪಿಸಿದವನು ಮೂಕ ಬೊಂಬೆಗಳನ್ನು ಮಾಡಿ ಅದರಲ್ಲಿ ನಂಬಿಕೆಯಿಡು ವಂಥ, ಎರಕದ ವಿಗ್ರಹದಿಂದ ಪ್ರಯೋಜನವೇನು?
Kannada BSI JV (ಕನ್ನಡ ಸತ್ಯವೇದವು J.V. (BSI))
ಕೆತ್ತಿದ ವಿಗ್ರಹವು ಏತಕ್ಕೆ? ರೂಪಿಸಿದವನು ಅದನ್ನೇಕೆ ಕೆತ್ತಬೇಕಾಗಿತ್ತು? ಸುಳ್ಳುಕಣಿಗಾಗಿ ಇಟ್ಟುಕೊಂಡ ಎರಕದ ಬೊಂಬೆಯಿಂದ ಪ್ರಯೋಜನವೇನು? ನಿರ್ಮಿಸಿದವನು ತನ್ನ ಕೈಕೆಲಸದ ಮೂಗಬೊಂಬೆಯಲ್ಲಿ ನಂಬಿಕೆಯಿಡುವದಕ್ಕೆ ಏನಾಧಾರ?
Kannada Bible (KNCL) BSI 2016
ಕೆತ್ತನೆಯ ವಿಗ್ರಹದಿಂದ ಪ್ರಯೋಜನ ಏನು? ಅದು ಕೇವಲ ಮಾನವನ ಕೃತಿ, ಸುಳ್ಳು ಕಣಿಗಾಗಿ ಇಟ್ಟುಕೊಂಡ ಎರಕದ ಗೊಂಬೆ. ಅದನ್ನು ನಿರ್ಮಿಸಿದಾತನಿಗೆ ಅದು ಯಾವ ಅಭಯವನ್ನು ತಾನೇ ತಂದೀತು? ಅದು ಬಾಯ್ದೆರೆಯಲಾಗದ ಮೂಕ ಬೊಂಬೆಯಷ್ಟೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಮನುಷ್ಯನು ಕೆತ್ತಿ ರೂಪಿಸಿದ ವಿಗ್ರಹದಿಂದ ಪ್ರಯೋಜನವೇನು? ಸುಳ್ಳನ್ನು ಬೋಧಿಸುವಂಥ ಪ್ರತಿಮೆಯ ಬೆಲೆಯೇನು? ಅದನ್ನು ರೂಪಿಸಿದವನು, ತನ್ನ ಸ್ವಂತ ಸೃಷ್ಟಿಯನ್ನು ನಂಬುತ್ತಾನೆ. ಮಾತನಾಡದಂಥ ಮೂರ್ತಿಗಳನ್ನು ಅವನು ಮಾಡುತ್ತಾನೆ.