Habakkuk 2:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಮೂರ್ತಿಗೆ ‘ಎದ್ದೇಳು’ ಎಂದು ಹೇಳುವವನಿಗೆ ಕೇಡಾಗುವುದು! ಮಾತಾಡಲಾಗದ ಒಂದು ಕಲ್ಲಿಗೆ ‘ಎಚ್ಚರವಾಗು’ ಎಂದು ಹೇಳುವವನಿಗೆ ಕೇಡಾಗುವುದು! ಅವುಗಳು ಅವನಿಗೆ ಸಹಾಯ ಮಾಡುವದಿಲ್ಲ. ಮಾಡಲಿಕ್ಕಾಗುವದೂ ಇಲ್ಲ. ಆ ವಿಗ್ರಹಗಳನ್ನು ಬೆಳ್ಳಿಬಂಗಾರದಿಂದ ಹೊದಿಸಿದರೂ ಆ ವಿಗ್ರಹಗಳಲ್ಲಿ ಜೀವವಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
‘ಮರದ ವಿಗ್ರಹಗಳಿಗೆ ಎಚ್ಚೆತ್ತುಕೋ,’ ಜಡವಾದ ಕಲ್ಲಿನ ವಿಗ್ರಹಗಳಿಗೆ, ‘ಎದ್ದೇಳು’ ಎಂದು ಅಪ್ಪಣೆಕೊಡುವವನು ಬುದ್ಧಿಹೀನನು. ಇಂಥ ಬೊಂಬೆಯು ಬೋಧಿಸೀತೇ? ಇಗೋ, ಆ ವಿಗ್ರಹಗಳಿಗೆ ಬೆಳ್ಳಿಬಂಗಾರವನ್ನು ಹೊದಿಸಿದ್ದಾರೆ ಆದರೂ ಅದರೊಳಗೆ ಜೀವವೇ ಇಲ್ಲ.
Kannada BSI Bible 2016
ಮರಕ್ಕೆ--ಎಚ್ಚರವಾಗು; ಮೂಕವಾದ ಕಲ್ಲಿಗೆ--ಎದ್ದು ಬೋಧಿಸಲಿ ಎಂದು ಹೇಳುವವನಿಗೆ ಅಯ್ಯೋ! ಇಗೋ, ಅದು ಬಂಗಾರದಿಂದಲೂ ಬೆಳ್ಳಿಯಿಂದಲೂ ಹೊದಿಸಲ್ಪಟ್ಟಿದೆ, ಆದರೆ ಅದರಲ್ಲಿ ಉಸಿರು ಎಷ್ಟು ಮಾತ್ರವೂ ಇಲ್ಲ.ಆದರೆ ಕರ್ತನು ತನ್ನ ಪರಿಶುದ್ಧ ಮಂದಿರದಲ್ಲಿ ಇದ್ದಾನೆ; ಆತನ ಮುಂದೆ ಭೂಮಿಯೆಲ್ಲಾ ಮೌನವಾಗಿರಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮರಕ್ಕೆ ಎಚ್ಚತ್ತುಕೋ, ಜಡವಾದ ಕಲ್ಲಿಗೆ ಎದ್ದೇಳು ಎಂದು ಅಪ್ಪಣೆಕೊಡುವವನ ಗತಿಯನ್ನು ಅಯ್ಯೋ, ಏನು ಹೇಳಲಿ! ಇಂಥ ಬೊಂಬೆಯು ಬೋಧಿಸೀತೇ? ಇಗೋ, ಅದಕ್ಕೆ ಬೆಳ್ಳಿಬಂಗಾರವು ಹೊದಗಿಸಿದೆ, ಅದರೊಳಗೆ ಶ್ವಾಸವೇನೂ ಇಲ್ಲ.
Kannada Bible (KNCL) BSI 2016
ಮರದ ತುಂಡಿಗೆ, ‘ಎಚ್ಚೆತ್ತುಕೊ’; ಜಡಕಲ್ಲಿಗೆ, ‘ಎದ್ದೇಳು’ ಎಂದು ಆಜ್ಞಾಪಿಸುವವನು ನಿಜಕ್ಕೂ ಬುದ್ಧಿಹೀನನು. ಬೊಂಬೆಯು ಬೋಧಿಸಬಲ್ಲದೇ? ಬೆಳ್ಳಿಬಂಗಾರವನ್ನು ಅದಕ್ಕೆ ಹೊದಿಸಿರುವುದೇನೋ ನಿಜ. ಆದರೆ ಅದಕ್ಕೆ ಉಸಿರೋ ಇಲ್ಲವೇ ಇಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮರಕ್ಕೆ, ‘ಎಚ್ಚರವಾಗು!’ ಮೂಕವಾದ ಕಲ್ಲಿಗೆ, ‘ಎದ್ದೇಳು!’ ಎಂದು ಹೇಳುವವನಿಗೆ ಕಷ್ಟ! ಅದು ಮಾರ್ಗದರ್ಶನ ನೀಡುವುದೇ? ಅದು ಬಂಗಾರ, ಬೆಳ್ಳಿಯಿಂದ ಹೊದಿಸಿದ್ದಾರೆ. ಆದರೆ ಅದರಲ್ಲಿ ಉಸಿರು ಎಷ್ಟು ಮಾತ್ರವೂ ಇಲ್ಲ.”