Habakkuk 2:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಹೇಳಿದ್ದು: “ಒಬ್ಬನನ್ನು ದ್ರಾಕ್ಷಾರಸವು ಮೋಸಪಡಿಸಬಹುದು. ಅದೇ ರೀತಿಯಲ್ಲಿ ಬಲಿಷ್ಠನ ಗರ್ವವು ಅವನನ್ನು ಮೋಸಪಡಿಸಬಹುದು. ಆದರೆ ಅವನಿಗೆ ಸಮಾಧಾನ ಸಿಕ್ಕುವುದಿಲ್ಲ. ಅವನು ಮರಣದಂತಿರುವನು. ಅವನಿಗೆ ಯಾವಾಗಲೂ ಹೆಚ್ಚೆಚ್ಚು ಬೇಕು. ಮರಣದಂತೆ ಅವನಿಗೆ ತೃಪ್ತಿಯೇ ಇರದು. ಅವನು ಜನಾಂಗಗಳನ್ನು ಸೋಲಿಸುತ್ತಲೇ ಇರುವನು. ಆ ಜನರನ್ನು ತನ್ನ ಕೈದಿಗಳನ್ನಾಗಿ ಮಾಡುತ್ತಲೇ ಇರುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲದೆ ಮದ್ಯಪಾನವು ಮೋಸಕರವಾದ ಕಾರಣ ದುಷ್ಟನನ್ನು ಮದವೇರಿಸುವುದು, ಸ್ವಸ್ಥಳದಲ್ಲಿ ನಿಲ್ಲಲು ಬಿಡುವುದಿಲ್ಲ; ಪಾತಾಳದಷ್ಟು ಅತಿ ಆಶೆಗೆ ಪ್ರೆರೇಪಿಸಿ ಮೃತ್ಯುವಿನಂತೆ ಅತೃಪ್ತನಾಗಿ ಜೀವಿಸುವನು. ಯೆಹೋವನ ಒಡಂಬಡಿಕೆಯ ವಿರುದ್ಧ ಜೀವಿಸುವವರನ್ನು ತನ್ನ ಕಡೆಗೆ ಆಕರ್ಷಿಸುವನು.
Kannada BSI Bible 2016
ಹೌದು, ಅವನು ದ್ರಾಕ್ಷಾರಸದಿಂದ ಉಲ್ಲಂಘಿಸು ತ್ತಾನೆ. ಅಹಂಕಾರದ ಮನುಷ್ಯನಾಗಿದ್ದಾನೆ; ಮನೆಯಲ್ಲಿ ಇರುವದಿಲ್ಲ; ಇವನು ಪಾತಾಳದ ಹಾಗೆ ತನ್ನ ಆಶೆಯನ್ನು ದೊಡ್ಡದಾಗಿ ಮಾಡಿಕೊಂಡು ಮರಣದ ಹಾಗಿದ್ದಾನೆ, ತೃಪ್ತಿಯಾಗುವದಿಲ್ಲ; ಎಲ್ಲಾ ಜನಾಂಗಗಳನ್ನು ತನಗಾಗಿ ಕೂಡಿಸುತ್ತಾನೆ; ಎಲ್ಲಾ ಜನಗಳನ್ನು ತನಗಾಗಿ ದೊಡ್ಡ ಗುಂಪನ್ನಾಗಿ ಮಾಡಿಕೊಳ್ಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲದೆ ದ್ರಾಕ್ಷಾರಸವು ಮೋಸಕರವಾದ ಕಾರಣ ದುಷ್ಟನು ಮದವೇರಿದ್ದಾನೆ, ಸ್ವಸ್ಥಳದಲ್ಲಿ ನಿಲ್ಲನು; ಪಾತಾಳದ ಹಾಗೆ ಅತ್ಯಾಶೆಪಡುತ್ತಾನೆ, ಮೃತ್ಯುವಿನಂತಿದ್ದಾನೆ, ತೃಪ್ತಿಯೇ ಇಲ್ಲ; ಸಕಲ ಜನಗಳನ್ನು ಎಳೆದುಕೊಳ್ಳುತ್ತಾನೆ, ಸಮಸ್ತ ಜನಾಂಗಗಳನ್ನು ರಾಶಿಮಾಡಿಕೊಳ್ಳುತ್ತಾನೆ.
Kannada Bible (KNCL) BSI 2016
ಐಶ್ವರ್ಯ ಮೋಸಕರ, ಮದವೇರಿದವನು ಮತ್ತನಾದವನಂತೆ ಅಸ್ಥಿರ. ಅವನ ಅತಿಯಾಸೆ ಪಾತಾಳದಷ್ಟು ವಿಶಾಲ. ಮೃತ್ಯುವಿನಂತೆ ಅವನಿಗೆ ತೃಪ್ತಿಯೇ ಇಲ್ಲ. ಸಕಲ ಜನಾಂಗಗಳನ್ನು ಬಲೆಯೊಳಗೆ ಎಳೆದುಕೊಳ್ಳುತ್ತಾನೆ. ಸಮಸ್ತ ಜನಾಂಗಗಳನ್ನು ರಾಶಿಮಾಡಿಕೊಳ್ಳುತ್ತಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ದ್ರಾಕ್ಷಾರಸವು ಮೋಸಕರ. ಅವನು ಅಹಂಕಾರಿ, ಎಂದಿಗೂ ವಿಶ್ರಾಂತಿ ಹೊಂದನು. ಪಾತಾಳದ ಹಾಗೆ ತನ್ನ ಆಶೆಯನ್ನು ದೊಡ್ಡದಾಗಿ ಮಾಡಿಕೊಳ್ಳುತ್ತಾನೆ. ಮರಣದ ಹಾಗಿದ್ದಾನೆ, ತೃಪ್ತಿಯಾಗುವುದಿಲ್ಲ; ಎಲ್ಲಾ ಜನಾಂಗಗಳನ್ನು ತನಗಾಗಿ ಕೂಡಿಸುತ್ತಾನೆ; ಎಲ್ಲಾ ಜನರನ್ನು ತನ್ನ ಸೆರೆಯಾಳುಗಳಾಗಿ ಮಾಡಿಕೊಳ್ಳುತ್ತಾನೆ.