Habakkuk 2:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಬೇಗನೇ ಅವರೆಲ್ಲಾ ಇವನನ್ನು ನೋಡಿ ನಗಾಡುವರು. ಅವನ ಸೋಲುವಿಕೆಯ ಕಥೆಗಳನ್ನು ವರ್ಣಿಸುವರು; ನಗಾಡುತ್ತಾ, ‘ಎಂಥಾ ದುಃಖಕರ ಸಂಗತಿ, ಅಷ್ಟೆಲ್ಲಾ ಸಂಪಾದಿಸಿದವನು ಅದನ್ನು ಇಟ್ಟುಕೊಳ್ಳಲಾಗಲಿಲ್ಲವಲ್ಲ. ಅವನು ಸಾಲಗಳನ್ನು ವಸೂಲಿ ಮಾಡಿ ತನ್ನನ್ನು ಐಶ್ವರ್ಯವಂತನನ್ನಾಗಿ ಮಾಡಿಕೊಂಡನು.’
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಆದರೆ ಹೀಗೆ ಅವನ ದುರಾಶೆಯ ಪಾಶಕ್ಕೆ ಗುರಿಯಾದವರು ಅವನ ಬಗ್ಗೆ ತಿಳಿದು ಗೇಲಿ, ಅಪಹಾಸ್ಯದ ಲಾವಣಿ ಗೀತೆಗಳನ್ನು ರಚಿಸಿ ಹಾಡುವರು. ‘ಅನ್ಯರ ವಸ್ತುಗಳನ್ನು ಅಡವಿಟ್ಟುಕೊಂಡು ಐಶ್ವರ್ಯ ಸಂಪಾದಿಸುವವನ ಗತಿಯನ್ನು ಏನೆಂದು ಹೇಳುವುದು, ಅವನು ಎಷ್ಟು ಕಾಲ ಹೀಗೆ ಮಾಡುವನು!’
Kannada BSI Bible 2016
ಇವರೆಲ್ಲರು ಅವನ ಮೇಲೆ ಸಾಮ್ಯವನ್ನೂ ಹಾಸ್ಯದ ಸಾಮತಿಯನ್ನೂ ಎತ್ತಿ--ತನಗಲ್ಲದ್ದನ್ನು ಹೆಚ್ಚಿಸಿಕೊಳ್ಳು ವವನಿಗೆ ಅಯ್ಯೋ! ಅದು ಎಷ್ಟರ ವರೆಗೆ? ತಾನಾಗಿ ತನ್ನ ಮೇಲೆ ಗಟ್ಟಿ ಮಣ್ಣನ್ನು ಹೊತ್ತುಕೊಳ್ಳುವವನಿಗೆ ಅಯ್ಯೋ ಎಂದು ಹೇಳರೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಇವುಗಳೆಲ್ಲಾ ಅವನ ಪ್ರಸ್ತಾಪವೆತ್ತಿ ಅವನ ವಿಷಯವಾಗಿ ಈ ಗೇಲಿಯ ಗೀತಗಳನ್ನು ಹಾಡುವವಲ್ಲವೆ - ಅಯ್ಯೋ, ತನ್ನದಲ್ಲದ್ದನ್ನು ಹೆಚ್ಚೆಚ್ಚಾಗಿ ಕೂಡಿಸಿಕೊಂಡು ಅಡವುಗಳನ್ನು ಹೊರೆಹೊರೆಯಾಗಿ ಇಟ್ಟುಕೊಳ್ಳುವವನ ಗತಿಯನ್ನು ಏನು ಹೇಳಲಿ! ಅವನು ಎಷ್ಟು ಕಾಲ ಹೀಗೆ ಮಾಡಾನು!
Kannada Bible (KNCL) BSI 2016
ಆದರೆ ಹೀಗೆ ಅವನಿಂದ ಆಕರ್ಷಿತರಾದವರೆಲ್ಲ ಅವನ ಸಮಾಚಾರವೆತ್ತಿ ಗೇಲಿಯ ಲಾವಣಿಕಟ್ಟುವರು. “ತನ್ನದಲ್ಲದನ್ನು ಹೆಚ್ಚು ಹೆಚ್ಚಾಗಿ ತುಂಬಿಸಿಕೊಂಡವನಿಗೆ ಧಿಕ್ಕಾರ! ಬಡ್ಡಿಗಾಗಿ ಅಡವಿಟ್ಟ ವಸ್ತುಗಳನ್ನು ರಾಶಿಮಾಡಿಕೊಂಡವನಿಗೆ ಧಿಕ್ಕಾರ! ಎಷ್ಟುಕಾಲ ಹೀಗೆ ಮಾಡಿಯಾನು?’
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರೆಲ್ಲರೂ ಅವನನ್ನು ಅಪಹಾಸ್ಯದ ಮಾತುಗಳಿಂದ ಅವಮಾನ ಮಾಡುವುದಿಲ್ಲವೋ? ಕದ್ದುಕೊಂಡ ವಸ್ತುಗಳನ್ನು ರಾಶಿಯಾಗಿ ಕೂಡಿಸಿಟ್ಟುಕೊಳ್ಳುವವನಿಗೆ ಅಕ್ರಮ ಮಾರ್ಗದಿಂದ ಐಶ್ವರ್ಯವಂತನಾಗಿರುವವನಿಗೆ ಕಷ್ಟ. ಇದೆಷ್ಟರವರೆಗೆ ಮುಂದುವರಿಯಬೇಕು?