Habakkuk 2:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಬಲಶಾಲಿಯಾದ ಮನುಷ್ಯನೇ, ನೀನು ಜನರಿಂದ ಹಣವನ್ನು ಸುಲಿದುಕೊಂಡಿರುವೆ. ಒಂದು ದಿವಸ ಆ ಜನರು ಎಚ್ಚರವಾಗಿ ತಮಗೆ ಏನಾಯಿತೆಂದು ಅರಿತುಕೊಳ್ಳುವರು. ನಿನಗೆ ವಿರುದ್ಧವಾಗಿ ಏಳುವರು. ನಿನ್ನ ಕೈಯಿಂದ ಆ ವಸ್ತುಗಳನ್ನು ಕಿತ್ತುಕೊಳ್ಳುವರು. ಆಗ ನೀನು ಭಯಗ್ರಸ್ತನಾಗುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಬಳಿ ಸಾಲಪಡೆದವರೇ ನಿನಗೆ ಎದುರಾಗಿ ನಿಲ್ಲುವರು, ನಿನಗೆ ಬಾಕಿ ಕೊಡಬೇಕಾದವರು ನಿನಗೆ ಬೆದರಿಕೆ ಹಾಕಿ ನಿನ್ನನ್ನು ಕೊಳ್ಳೆ ಹೊಡೆದು ಲೂಟಿಮಾಡುವರು.
Kannada BSI Bible 2016
ನಿನ್ನನ್ನು ಕಚ್ಚುವವರು ಕ್ಷಣಮಾತ್ರದಲ್ಲಿ ಏಳರೋ? ನಿನ್ನನ್ನು ಪೀಡಿಸುವವರು ಎಚ್ಚರವಾಗರೋ? ಆಗ ನೀನು ಅವರಿಗೆ ಸುಲಿಗೆ ಯಾಗುವಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನನ್ನು ಕಚ್ಚುವವರು ಫಕ್ಕನೆ ತಲೆಯೆತ್ತುವರು, ನಿನ್ನನ್ನು ಒದ್ದಾಡಿಸುವವರು ಎಚ್ಚರಗೊಳ್ಳುವರು; ನೀನು ಅವರಿಗೆ ಸೂರೆಯಾಗುವಿಯಷ್ಟೆ.
Kannada Bible (KNCL) BSI 2016
ನಿನ್ನ ಸಾಲಗಾರರೇ ತಟ್ಟನೆ ನಿನಗೆದುರಾಗಿ ನಿಲ್ಲುವರು; ಬಾಕಿದಾರರೇ ಎಚ್ಚೆತ್ತು ನಿನಗೆ ಬೆದರಿಕೆ ಹಾಕುವರು. ಕೊಳ್ಳೆಹೊಡೆದು ನಿನ್ನನ್ನು ಲೂಟಿಮಾಡುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ಸಾಲಗಾರರು ಕ್ಷಣಮಾತ್ರದಲ್ಲಿ ಏಳರೋ? ಅವರು ಎಚ್ಚರಗೊಂಡು ನಿನಗೆ ಬೆದರಿಕೆ ಹಾಕುವರೋ? ಆಗ ನೀನು ಅವರಿಗೆ ಸುಲಿಗೆಯಾಗುವೆ.