Habakkuk 2:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಹೌದು, ಕೆಟ್ಟದ್ದನ್ನು ಮಾಡಿ ಧನಿಕನಾದವನಿಗೆ ಬಹಳ ಕೇಡಾಗುವುದು. ಆ ಮನುಷ್ಯನು ಒಂದು ಸುರಕ್ಷಿತವಾದ ಸ್ಥಳದಲ್ಲಿ ವಾಸಿಸಲು ಇದನ್ನೆಲ್ಲಾ ಮಾಡುತ್ತಾನೆ. ಹಾಗೆ ಮಾಡುವದರಿಂದ ಬೇರೆ ಜನರು ಅವನಿಂದ ಕಿತ್ತುಕೊಳ್ಳಲು ಸಾಧ್ಯವಿಲ್ಲವೆಂದು ಅವನು ತಿಳಿಯುತ್ತಾನೆ. ಆದರೆ ಕೆಟ್ಟ ಸಂಗತಿಗಳು ಅವನಿಗೆ ಸಂಭವಿಸುವವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
‘ಕೇಡಿನಿಂದ, ತಪ್ಪಿಸಿಕೊಳ್ಳಲು ತನ್ನ ಗೂಡನ್ನು ಎತ್ತರದಲ್ಲಿ ಕಟ್ಟಿ ತಪ್ಪಿಸಿಕೊಳ್ಳಬೇಕೆಂದು, ತನ್ನ ಕುಟುಂಬಕ್ಕೆ ಆಸ್ತಿಯನ್ನು ಅನ್ಯಾಯವಾಗಿ ಮೋಸದಿಂದ ದೋಚಿಕೊಳ್ಳುವವನ ಗತಿಯನ್ನು ಏನು ಹೇಳಲಿ;
Kannada BSI Bible 2016
ತನ್ನ ಗೂಡನ್ನು ಉನ್ನತದಲ್ಲಿ ಇಡುವ ಹಾಗೆಯೂ ಕೇಡಿನ ಕೈಗೆ ತಪ್ಪಿಸಿಕೊಳ್ಳುವ ಹಾಗೆಯೂ ತನ್ನ ಮನೆ ಗೋಸ್ಕರ ದುರ್ಲಾಭವನ್ನು ಆಶಿಸುವವನಿಗೆ ಅಯ್ಯೋ!
Kannada BSI JV (ಕನ್ನಡ ಸತ್ಯವೇದವು J.V. (BSI))
ಅಯ್ಯೋ, ತನ್ನ ಗೂಡನ್ನು ಎತ್ತರದಲ್ಲಿ ಕಟ್ಟಿ ಕೇಡಿನೊಳಗಿಂದ ತಪ್ಪಿಸಿಕೊಳ್ಳಬೇಕೆಂದು ತನ್ನ ಕುಲಕ್ಕೆ ಆಸ್ತಿಯನ್ನು ಅನ್ಯಾಯವಾಗಿ ದೋಚಿಕೊಳ್ಳುವವನ ಗತಿಯನ್ನು ಏನು ಹೇಳಲಿ;
Kannada Bible (KNCL) BSI 2016
ಕೇಡಿನಿಂದ ತಪ್ಪಿಸಿಕೊಳ್ಳುವ ಸಲುವಾಗಿ ನಿನ್ನ ನಿವಾಸವನ್ನು ಎತ್ತರವಾಗಿ ಕಟ್ಟಿಕೊಂಡೆ. ನಿನ್ನ ಕುಟುಂಬಕ್ಕಾಗಿ ಇತರರ ಆಸ್ತಿಯನ್ನು ಅನ್ಯಾಯವಾಗಿ ದೋಚಿಕೊಂಡೆ, ನಿನ್ನಗೆ ಧಿಕ್ಕಾರ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನ್ಯಾಯದ ಲಾಭದಿಂದ ತನ್ನ ನಿವಾಸ ಕಟ್ಟಿಕೊಳ್ಳುವವನಿಗೂ, ತನ್ನ ಗೂಡನ್ನು ಉನ್ನತದಲ್ಲಿಡುವವನಿಗೂ, ನಾಶದ ಹಿಡಿತದಿಂದ ತಪ್ಪಿಸಿಕೊಳ್ಳಬಯಸುವವನಿಗೂ ಕಷ್ಟ!