Habakkuk 3:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ವೈರಿಗಳ ಸೈನ್ಯವನ್ನು ಮೋಶೆಯ ಕೋಲಿನಿಂದ ನಿಲ್ಲಿಸಿದೆ. ಆ ಸೈನಿಕರು ಬಿರುಗಾಳಿಯಂತೆ ನಮ್ಮೊಂದಿಗೆ ಯುದ್ಧ ಮಾಡಲು ಬಂದರು. ರಸ್ತೆಯ ಮೇಲೆ ಇದ್ದ ಒಬ್ಬ ಬಡ ಮನುಷ್ಯನನ್ನು ದೋಚಿದ ಪ್ರಕಾರ ನಮ್ಮನ್ನೂ ಸುಲಭವಾಗಿ ಗೆಲ್ಲುವೆವೆಂದು ಅವರು ನೆನೆಸಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಿಕ್ಕಿಲ್ಲದವರನ್ನು ಮರೆಯಲ್ಲಿ ನುಂಗಲು ಹೆಚ್ಚಳಪಡುವವರಾಗಿ ನನ್ನನ್ನು ಚದುರಿಸಬೇಕೆಂದು ನನ್ನ ಮೇಲೆ ಬಿರುಗಾಳಿಯಂತೆ ನುಗ್ಗಿದ ಅವನ ಭಟರ ತಲೆಯನ್ನು ಅವನ ದೊಣ್ಣೆಗಳಿಂದಲೇ ಒಡೆದಿದ್ದೀ
Kannada BSI Bible 2016
ಅವನ ದೊಣ್ಣೆಗಳಿಂದಲೇ ತನ್ನ ಹಳ್ಳಿಗಳ ಮುಖ್ಯಸ್ಥನನ್ನು ಹೊಡೆದಿದ್ದೀ; ಅವರು ನನ್ನನ್ನು ಚದುರಿಸುವದಕ್ಕೆ ಬಿರುಗಾಳಿಯಂತೆ ಬಂದರು; ಬಡವರನ್ನು ಅಂತರಂಗದಲ್ಲಿ ನುಂಗಿಬಿಡುವ ಹಾಗೆ ಅವರಿಗೆ ಸಂತೋಷವು ಇರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ದಿಕ್ಕಿಲ್ಲದವರನ್ನು ಮರೆಯಲ್ಲಿ ನುಂಗಲು ಹೆಚ್ಚಳಪಡುವವರಾಗಿ ನನ್ನನ್ನು ಚದರಿಸಬೇಕೆಂದು ನನ್ನ ಮೇಲೆ ಬಿರುಗಾಳಿಯಂತೆ ನುಗ್ಗಿದ ಅವನ ಭಟರ ತಲೆಯನ್ನು ಅವನ ದೊಣ್ಣೆಗಳಿಂದಲೇ ಒಡೆದಿದ್ದೀ.
Kannada Bible (KNCL) BSI 2016
ದೀನರನು ಗುಟ್ಟಾಗಿ ದಮನಮಾಡಿ ಹಿಗ್ಗುವವರಂತೆ ನನ್ನ ಚದರಿಸಲು ಬಂದರು ಅವನ ಭಟರು ಬಿರುಗಾಳಿಯಂತೆ ಅವನ ಆಯುಧಗಳಿಂದಲೆ ಅವರ ತಲೆಯನು ನೀ ಬಡಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಮ್ಮನ್ನು ಚದುರಿಸಲು ಅವನ ಯುದ್ಧವೀರರು ಮುತ್ತಿಗೆ ಹಾಕಿದಾಗ, ಅವನ ಸ್ವಂತ ಭರ್ಜಿಯಿಂದಲೇ ಅವನ ತಲೆಯನ್ನು ತಿವಿದಿ. ಅವರು ಅಡಗಿಕೊಂಡಿರುವ ಬಡವರನ್ನು ನುಂಗಲು ಬಂದವರೋ ಎಂಬಂತೆ ಬಂದಿದ್ದರಲ್ಲವೇ?