Habakkuk 3:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಂಜೂರದ ಮರಗಳಲ್ಲಿ ಅಂಜೂರದ ಹಣ್ಣು ಬೆಳೆಯದಿದ್ದರೂ ದ್ರಾಕ್ಷಿಬಳ್ಳಿಗಳಲ್ಲಿ ದ್ರಾಕ್ಷಿಹಣ್ಣುಗಳು ಬೆಳೆಯದಿದ್ದರೂ ಎಣ್ಣೆಮರಗಳಲ್ಲಿ ಆಲೀವ್ ಕಾಯಿಗಳು ಬೆಳೆಯದಿದ್ದರೂ ಹೊಲದಲ್ಲಿ ಪೈರು ಬೆಳೆಯದಿದ್ದರೂ ಹಟ್ಟಿಯಲ್ಲಿ ಯಾವ ಕುರಿಗಳು ಇಲ್ಲದಿದ್ದರೂ ಕೊಟ್ಟಿಗೆಯೊಳಗೆ ಯಾವ ಪಶುಗಳು ಇಲ್ಲದಿದ್ದರೂ
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಹಾ, ಅಂಜೂರವು ಚಿಗುರದಿದ್ದರೂ, ದ್ರಾಕ್ಷಾಲತೆಗಳಲ್ಲಿ ಹಣ್ಣು ಸಿಕ್ಕದಿದ್ದರೂ, ಎಣ್ಣೆ ಮರಗಳ ಉತ್ಪತ್ತಿಯು ಶೂನ್ಯವಾದರೂ, ಹೊಲಗದ್ದೆಗಳು ಆಹಾರ ಧಾನ್ಯಗಳನ್ನು ಉತ್ಪತ್ತಿಮಾಡದಿದ್ದರೂ, ಕುರಿಹಟ್ಟಿಗಳು ಬರಿದಾಗಿ ಹೋದರೂ, ಕೊಟ್ಟಿಗೆಗಳಲ್ಲಿ ದನಕರುಗಳು ಇಲ್ಲವಾದರೂ,
Kannada BSI Bible 2016
ಅಂಜೂರದ ಮರವು ಚಿಗುರ ದಿದ್ದರೂ ದ್ರಾಕ್ಷೇಬಳ್ಳಿಗಳಲ್ಲಿ ಹಣ್ಣು ಇಲ್ಲದಿದ್ದರೂ ಎಣ್ಣೇ ಮರಗಳ ಉತ್ಪತ್ತಿಯು ನಿಂತುಹೋದರೂ ಹೊಲಗಳು ಆಹಾರ ಕೊಡದಿದ್ದರೂ ಹಟ್ಟಿಯೊಳಗಿಂದ ಮಂದೆಗಳು ಕಡಿದು ಬಿಡಲ್ಪಟ್ಟಿದ್ದರೂ ಗೋದಲಿಗಳಲ್ಲಿ ಮಂದೆ ಇಲ್ಲದಿದ್ದರೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಆಹಾ, ಅಂಜೂರವು ಚಿಗುರದಿದ್ದರೂ ದ್ರಾಕ್ಷಾಲತೆಗಳಲ್ಲಿ ಹಣ್ಣು ಸಿಕ್ಕದಿದ್ದರೂ ಎಣ್ಣೆಮರಗಳ ಉತ್ಪತ್ತಿಯು ಶೂನ್ಯವಾದರೂ ಹೊಲಗದ್ದೆಗಳು ಆಹಾರವನ್ನು ಕೊಡದೆಹೋದರೂ ಹಿಂಡು ಹಟ್ಟಿಯೊಳಗಿಂದ ನಾಶವಾದರೂ ಮಂದೆಯು ಕೊಟ್ಟಿಗೆಗಳೊಳಗೆ ಇಲ್ಲದಿದ್ದರೂ
Kannada Bible (KNCL) BSI 2016
ಅಂಜೂರದ ಮರ ಚಿಗುರದೆಹೋದರೂ ದ್ರಾಕ್ಷಾಲತೆಗಳಲ್ಲಿ ಹಣ್ಣು ಕಾಣದೆಹೋದರೂ ಎಣ್ಣೆಮರಗಳ ಉತ್ಪತ್ತಿಯು ಶೂನ್ಯವಾದರೂ ಹೊಲಗದ್ದೆಗಳು ಆಹಾರ ಕೊಡದೆಹೋದರೂ ಕುರಿಹಟ್ಟಿಗಳು ಬರಿದಾಗಿಹೋದರೂ ಕೊಟ್ಟಿಗೆಗಳಲ್ಲಿ ದನಕರುಗಳು ಇಲ್ಲವಾದರೂ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಂಜೂರದ ಗಿಡವು ಚಿಗುರದಿದ್ದರೂ, ದ್ರಾಕ್ಷಾಲತೆಗಳಲ್ಲಿ ಹಣ್ಣು ಫಲಿಸದಿದ್ದರೂ, ಎಣ್ಣೆಮರಗಳ ಉತ್ಪತ್ತಿಯು ಶೂನ್ಯವಾದರೂ, ಹೊಲಗಳು ಆಹಾರ ಕೊಡದಿದ್ದರೂ, ಕುರಿಹಟ್ಟಿಗಳು ಬರಿದಾಗಿ ಹೋದರೂ, ಕೊಟ್ಟಿಗೆಗಳಲ್ಲಿ ದನಕರುಗಳು ಇಲ್ಲವಾದರೂ,