Habakkuk 3:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬೆಳಕಿನ ಕಿರಣಗಳು ಆತನ ಕೈಯಿಂದ ಹೊಳೆಯುತ್ತವೆ. ಅದು ಹೊಳೆಯುವಂಥ ಪ್ರಕಾಶಮಾನವಾದ ಹೊಳಪು. ಆ ಕೈಗಳಲ್ಲಿ ಅಂಥಾ ಶಕ್ತಿಯು ಅಡಕವಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನ ತೇಜಸ್ಸು ಸೂರ್ಯನಂತಿದೆ, ಆತನ ಕೈಗಳಿಂದ ಕಿರಣಗಳು ಹೊರಹೊಮ್ಮುತ್ತಿವೆ, ಆತನು ಶಕ್ತಿ ಸಾಮರ್ಥ್ಯಗಳ ನಿಧಿ.
Kannada BSI Bible 2016
ಆತನ ಪ್ರಕಾಶವು ಬೆಳಕಿನ ಹಾಗಿತ್ತು; ಆತನಿಗೆ ತನ್ನ ಕೈಯೊಳಗಿಂದ ಕೊಂಬುಗಳು ಬಂದವು; ಅಲ್ಲಿ ಆತನ ಅಧಿಕಾರವನ್ನು ಮರೆಮಾಡುವದಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
[ಆತನ] ತೇಜಸ್ಸು ಸೂರ್ಯನಂತಿದೆ, ಅದರ ಪಕ್ಕಗಳಲ್ಲಿ ಕಿರಣಗಳು ಹೊರಡುತ್ತಿವೆ; ಅದೇ ಆತನ ಶಕ್ತಿನಿಧಿ.
Kannada Bible (KNCL) BSI 2016
ರವಿಯಂತಿದೆ ಆತನ ತೇಜಸ್ಸಿನ ಮೆರೆತ ಕಿರಣಗಳು ಹೊರಹೊಮ್ಮುತಿವೆ ಆತನ ಕರಗಳಿಂದ ಮರೆಯಾಗಿದೆ ಅಲ್ಲೇ ಆತನ ಶಕ್ತಿಸಾಮರ್ಥ್ಯ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ ತೇಜಸ್ಸು ಸೂರ್ಯೋದಯದ ಹಾಗಿತ್ತು. ಕಿರಣಗಳು ಅವರ ಹಸ್ತಗಳಿಂದ ಮಿಂಚಿದವು. ಅದರಲ್ಲಿ ಅವರ ಬಲ ಅಡಗಿತ್ತು.