Habakkuk 3:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ನಿಂತು ಪ್ರಪಂಚದ ನ್ಯಾಯತೀರಿಸಿದನು. ಎಲ್ಲಾ ಜನಾಂಗಗಳ ಜನರ ಕಡೆಗೆ ನೋಡಿದನು. ಅವರು ಭಯದಿಂದ ನಡುಗಿದರು. ತಲಾಂತರಗಳಿಂದ ಪರ್ವತಗಳು ಸ್ಥಿರವಾಗಿ ನಿಂತಿದ್ದವು. ಆದರೆ ಅದೇ ಪರ್ವತಗಳು ತುಂಡುತುಂಡಾಗಿ ಬಿದ್ದವು. ಪುರಾತನ ಕಾಲದ ಬೆಟ್ಟಗಳು ಬಿದ್ದುಹೋದವು. ಹಾಗೆ ಮಾಡಲು ದೇವರು ಯಾವಾಗಲೂ ಶಕ್ತನಾಗಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ನಿಂತುಕೊಳ್ಳಲು ಭೂಮಿಯು ಅಳೆದನು. ಆತನು ದೃಷ್ಟಿಸಲು ಜನಾಂಗಗಳು ಬೆದರುತ್ತವೆ; ಪುರಾತನ ಪರ್ವತಗಳು ಸೀಳಿಹೋಗುತ್ತವೆ; ಸನಾತನ ಗಿರಿಶಿಖರಗಳು ಕುಸಿದು ಬೀಳುತ್ತವೆ; ಆತನ ಆಗಮನವು ಅನಾದಿಯಿಂದ ಹೀಗೆಯೇ ಇರುವುದು.
Kannada BSI Bible 2016
ಆತನು ನಿಂತುಕೊಂಡು ಭೂಮಿಯನ್ನು ಅಳೆದನು. ಆತನು ನೋಡಿ ಜನಾಂಗ ಗಳನ್ನು ಓಡಿಸಿಬಿಟ್ಟನು; ಶಾಶ್ವತವಾದ ಪರ್ವತಗಳು ಚದುರಿಸಲ್ಪಟ್ಟವು; ನಿತ್ಯವಾದ ಗುಡ್ಡಗಳು ನಡುಗಿ ದವು; ಆತನ ಮಾರ್ಗಗಳು ನಿತ್ಯವಾದವುಗಳೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ನಿಂತುಕೊಳ್ಳಲು ಭೂವಿುಯು ಕಂಪಿಸುತ್ತದೆ; ದೃಷ್ಟಿಸಲು ಜನಾಂಗಗಳು ಬೆದರುತ್ತವೆ; ಪುರಾತನ ಪರ್ವತಗಳು ಸೀಳಿಹೋಗುತ್ತವೆ; ಸನಾತನ ಗಿರಿಗಳು ಕುಸಿದುಬೀಳುತ್ತವೆ; ಆತನ ಆಗಮನವು ಅನಾದಿಯಿಂದ ಹೀಗೆಯೇ ಇರುವದು.
Kannada Bible (KNCL) BSI 2016
ಕಂಪಿಸುತ್ತದೆ ಭೂಮಿ ಆತ ನಿಂತಾಗ ಅದರುತ್ತದೆ ಲೋಕ ಆತ ದಿಟ್ಟಿಸಿದಾಗ ಸೀಳಿಹೋಗುತ್ತವೆ ಪುರಾತನಪರ್ವತಗಳು ಕುಸಿದುಬೀಳುತ್ತವೆ ಸನಾತನ ಗಿರಿಗಳು ಅನಾದಿಯಿಂದ ಹಾಗೆಯೆ ಆತನ ಆಗಮನಗಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ನಿಂತುಕೊಂಡು ಭೂಮಿಯನ್ನು ನಡುಗಿಸಿದರು. ಅವರು ನೋಡಿ ಜನಾಂಗಗಳನ್ನು ನಡುಗುವಂತೆ ಮಾಡಿದರು. ಪುರಾತನ ಪರ್ವತಗಳು ಸೀಳಿಹೋದವು. ಹಳೆಯ ಕಾಲದ ಗುಡ್ಡಗಳು ಬಿದ್ದು ಹೋದವು. ಅವರ ಮಾರ್ಗಗಳು ನಿತ್ಯವಾದವುಗಳೇ.