Haggai 1:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನಿಗೂ ಯೆಹೋಚಾದಾಕನ ಮಗನೂ ಪ್ರಧಾನಯಾಜಕನೂ ಆದ ಯೆಹೋಶುವನಿಗೂ ಸಂದೇಶವನ್ನು ಕೊಡಲು ದೇವರಾದ ಯೆಹೋವನು ಹಗ್ಗಾಯನನ್ನು ಕಳುಹಿಸಿದನು. ಆದ್ದರಿಂದ ಇವರು ಮತ್ತು ಎಲ್ಲಾ ಜನರು ತಮ್ಮ ದೇವರಾದ ಯೆಹೋವನ ಸ್ವರವನ್ನು ಮತ್ತು ಪ್ರವಾದಿಯಾದ ಹಗ್ಗಾಯನ ಮಾತುಗಳನ್ನು ಕೇಳಿದರು ಮತ್ತು ತಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲ್, ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ಸಮಸ್ತ ಇಸ್ರಾಯೇಲ್ ಜನಶೇಷ, ಇವರೆಲ್ಲಾ ಯೆಹೋವನೆಂಬ ತಮ್ಮ ದೇವರ ನುಡಿಗೂ, ಯೆಹೋವನೆಂಬ ತಮ್ಮ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಯಾದ ಹಗ್ಗಾಯನು ಹೇಳಿದ ಮಾತುಗಳಿಗೂ ಕಿವಿಗೊಟ್ಟು ಯೆಹೋವನಲ್ಲಿ ಭಯಭಕ್ತಿಯುಳ್ಳವರಾದರು.
Kannada BSI Bible 2016
ಆಗ ಶೆಯಲ್ತೀಯೇಲನ ಮಗನಾದ ಜೆರುಬ್ಬಾ ಬೆಲನೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನೂ ಜನರಲ್ಲಿ ಉಳಿದವರೆ ಲ್ಲರೂ ತಮ್ಮ ದೇವರಾದ ಕರ್ತನ ಶಬ್ದವನ್ನೂ ತಮ್ಮ ದೇವರಾದ ಕರ್ತನು ಕಳುಹಿಸಿದ ಪ್ರವಾದಿಯಾದ ಹಗ್ಗಾಯನ ಮಾತುಗಳನ್ನೂ ಕೇಳಿದರು; ಜನರು ಕರ್ತ ನಿಗೆ ಭಯಪಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲ್, ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ಸಮಸ್ತಜನಶೇಷ, ಇವರೆಲ್ಲಾ ಯೆಹೋವನೆಂಬ ತಮ್ಮ ದೇವರ ನುಡಿಗೂ ಯೆಹೋವನೆಂಬ ತಮ್ಮ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಯಾದ ಹಗ್ಗಾಯನು ಹೇಳಿದ ಮಾತುಗಳಿಗೂ ಕಿವಿಗೊಟ್ಟು ಯೆಹೋವನಲ್ಲಿ ಭಯಭಕ್ತಿಯುಳ್ಳವರಾದರು.
Kannada Bible (KNCL) BSI 2016
ಆಗ ಶೆಯಲ್ತೀಯೇಲನ ಮಗ ಜೆರುಬ್ಬಾಬೆಲ್, ಯೆಹೋಚಾದಕನ ಮಗನೂ ಮಹಾಯಾಜಕನೂ ಆದ ಯೆಹೋಶುವ ಮತ್ತು ಅಳಿದುಳಿದ ಜನರೆಲ್ಲರು ದೇವರಾದ ಸರ್ವೇಶ್ವರಸ್ವಾಮಿಯ ನುಡಿಗೆ ಕಿವಿಗೊಟ್ಟರು. ಆ ಸ್ವಾಮಿಯ ಅಪ್ಪಣೆಯ ಪ್ರಕಾರ ಪ್ರವಾದಿ ಹಗ್ಗಾಯನು ಹೇಳಿದ ಮಾತನ್ನು ಕೇಳಿದರು. ಆ ಸ್ವಾಮಿಯಲ್ಲಿ ಭಯಭಕ್ತಿಯುಳ್ಳವರಾದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಶೆಯಲ್ತಿಯೇಲನ ಮಗ ಜೆರುಬ್ಬಾಬೆಲನೂ ಯೆಹೋಚಾದಾಕನ ಮಗ ಮತ್ತು ಮಹಾಯಾಜಕ ಯೆಹೋಶುವನೂ ಜನರಲ್ಲಿ ಉಳಿದವರೆಲ್ಲರೂ ತಮ್ಮ ದೇವರಾದ ಯೆಹೋವ ದೇವರ ಮಾತನ್ನೂ ತಮ್ಮ ದೇವರಾದ ಯೆಹೋವ ದೇವರು ಕಳುಹಿಸಿದ ಪ್ರವಾದಿಯಾದ ಹಗ್ಗಾಯನ ಮಾತುಗಳನ್ನೂ ಕೇಳಿದರು. ಜನರು ಯೆಹೋವ ದೇವರಿಗೆ ಭಯಪಟ್ಟರು.