Haggai 1:14 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ದೇವರಾದ ಯೆಹೋವನು ಆಲಯವನ್ನು ಕಟ್ಟುವಂತೆ ಜನರನ್ನು ಪ್ರೇರೇಪಿಸಿದನು. ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲನು ಯೆಹೂದ ಪ್ರಾಂತ್ಯದ ರಾಜ್ಯಪಾಲನಾಗಿದ್ದನು. ಯೆಹೋವನು ಅವನನ್ನು ಪ್ರೇರೇಪಿಸಿದನು. ಯೆಹೋಚಾದಾಕನ ಮಗನಾದ ಯೆಹೋಶುವನು ಪ್ರಧಾನ ಯಾಜಕನಾಗಿದ್ದನು. ಯೆಹೋವನು ಅವನನ್ನು ಪ್ರೇರೇಪಿಸಿದನು ಅಲ್ಲದೆ ಯೆಹೋವನು ಆಲಯವನ್ನು ಕಟ್ಟಲು ಎಲ್ಲಾ ಜನರನ್ನು ಪ್ರೋತ್ಸಾಹಿಸಿದನು. ಆದ್ದರಿಂದ ಅವರೆಲ್ಲರೂ ತಮ್ಮ ದೇವರಾದ ಯೆಹೋವನಿಗೆ ಆಲಯವನ್ನು ಕಟ್ಟಲು ಪ್ರಾರಂಭಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೂಡಲೇ ಶೆಯಲ್ತೀಯೇಲನು ಮಗನೂ, ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲ್, ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ಮತ್ತು ಸಮಸ್ತ ಜನರೆಲ್ಲರ ಮನಸ್ಸುಗಳನ್ನು ಸೇನಾಧೀಶ್ವರನಾದ ಯೆಹೋವನು ಪ್ರೇರೇಪಿಸಲು,
Kannada BSI Bible 2016
ಕರ್ತನು ಯೆಹೂದದ ಅಧಿಪತಿಯಾದ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನ ಆತ್ಮ ವನ್ನೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನ ಆತ್ಮವನ್ನೂ ಜನರಲ್ಲಿ ಉಳಿದವರೆಲ್ಲರ ಆತ್ಮವನ್ನೂ ಉದ್ರೇಕಿಸಿದ್ದರಿಂದ ಅವರು ಬಂದು ಅರಸನಾದ ದಾರ್ಯಾವೆಷನ ಎರಡನೆಯ ವರುಷದ ಆರನೆಯ ತಿಂಗಳಿನ ಇಪ್ಪತ್ತು ನಾಲ್ಕನೆಯ ದಿನದಲ್ಲಿತಮ್ಮ ದೇವರಾದ ಸೈನ್ಯಗಳ ಕರ್ತನ ಆಲಯದಲ್ಲಿ ಬಂದು ಕೆಲಸ ಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೂಡಲೆ ಶೆಯಲ್ತೀಯೇಲನ ಮಗನೂ ಯೆಹೂದ ದೇಶಾಧಿಪತಿಯೂ ಆದ ಜೆರುಬ್ಬಾಬೆಲ್, ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ಸಮಸ್ತಜನಶೇಷ, ಇವೆಲ್ಲರ ಮನಸ್ಸುಗಳನ್ನು ಯೆಹೋವನು ಪ್ರೇರಿಸಲು
Kannada Bible (KNCL) BSI 2016
ಕೂಡಲೆ ಶೆಯಲ್ತೀಯೇಲನ ಮಗನೂ ಜುದೇಯ ನಾಡಿನ ದೇಶಾಧಿಪತಿಯೂ ಆದ ಜೆರುಬ್ಬಾಬೆಲ್, ಯೆಹೋಚಾದಕನ ಮಗನೂ ಮಹಾಯಾಜಕನೂ ಆದ ಯೆಹೋಶುವ, ಮತ್ತು ಅಳಿದುಳಿದ ಜನರೆಲ್ಲರು ಸ್ವಾಮಿಯ ಪ್ರೇರಣೆಯನ್ನು ಪಡೆದರು.