Haggai 1:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ಆಲಯವನ್ನು ಕಟ್ಟಲು ಇದು ಸರಿಯಾದ ಸಮಯವಲ್ಲವೆಂದು ಜನರು ಹೇಳುತ್ತಿದ್ದಾರೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಯೆಹೋವನ ಆಲಯವನ್ನು ಕಟ್ಟುವುದಕ್ಕೆ ಸಮಯವು ಇನ್ನು ಬಂದಿಲ್ಲ” ಎಂದು ಜನರು ಅಂದುಕೊಳ್ಳುತ್ತಾರಲ್ಲಾ.
Kannada BSI Bible 2016
ಸೈನ್ಯಗಳ ಕರ್ತನು ಮಾತನಾಡಿ ಹೀಗೆ ಹೇಳುತ್ತಾನೆ, ಏನಂದರೆ--ಕಾಲವು ಅಂದರೆ ಕರ್ತನ ಆಲಯವನ್ನು ಕಟ್ಟುವ ಕಾಲವು ಬರಲಿಲ್ಲ ಎಂದು ಈ ಜನರು ಅನ್ನು ತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಯೆಹೋವನ ಆಲಯವನ್ನು ಕಟ್ಟುವದಕ್ಕೆ ಸಮಯವು ಇನ್ನೂ ಬಂದಿಲ್ಲ ಎಂದು ಈ ಜನರು ಅಂದುಕೊಳ್ಳುತ್ತಾರಲ್ಲಾ.
Kannada Bible (KNCL) BSI 2016
ಸೇನಾಧೀಶ್ವರರಾದ ಸರ್ವೇಶ್ವರ ಇಂತೆನ್ನುತ್ತಾರೆ: “ಮಹಾದೇವಾಲಯವನ್ನು ಪುನಃ ಕಟ್ಟುವುದಕ್ಕೆ ಸಮಯ ಇನ್ನೂ ಬಂದಿಲ್ಲ ಎಂದುಕೊಳ್ಳುತ್ತಾರೆ ಈ ಜನರು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಯೆಹೋವ ದೇವರ ಆಲಯವನ್ನು ಕಟ್ಟುವ ಕಾಲವು ಇನ್ನೂ ಬಂದಿಲ್ಲ,’ ಎಂದು ಈ ಜನರು ಅಂದುಕೊಳ್ಳುತ್ತಾರೆ.”