Haggai 2:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪರ್ಶಿಯ ದೇಶದ ರಾಜನಾದ ದಾರ್ಯಾವೆಷನ ಆಳ್ವಿಕೆಯ ಎರಡನೇ ವರ್ಷದ ಒಂಭತ್ತನೆಯ ತಿಂಗಳಿನ ಇಪ್ಪತ್ನಾಲ್ಕನೆಯ ದಿನದಂದು ಯೆಹೋವನ ಸಂದೇಶವು ಪ್ರವಾದಿಯಾದ ಹಗ್ಗಾಯನಿಗೆ ಬಂದಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಒಂಭತ್ತನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಯೆಹೋವನು ಪ್ರವಾದಿಯಾದ ಹಗ್ಗಾಯನ ಮೂಲಕ ಈ ವಾಕ್ಯವನ್ನು ದಯಪಾಲಿಸಿದನು.
Kannada BSI Bible 2016
ದಾರ್ಯಾವೆಷನ ಎರಡನೇ ವರುಷದಲ್ಲಿ ಒಂಭ ತ್ತನೇ ತಿಂಗಳಿನ, ಇಪ್ಪತ್ತನಾಲ್ಕನೆ ದಿನದಲ್ಲಿ ಕರ್ತನ ವಾಕ್ಯವು ಪ್ರವಾದಿಯಾದ ಹಗ್ಗಾಯನಿಂದ ಉಂಟಾಗಿ ಹೇಳಿದ್ದೇನಂದರೆ,
Kannada BSI JV (ಕನ್ನಡ ಸತ್ಯವೇದವು J.V. (BSI))
ದಾರ್ಯಾವೆಷನ ಆಳಿಕೆಯ ಎರಡನೆಯ ವರುಷದ ಒಂಭತ್ತನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಯೆಹೋವನು ಪ್ರವಾದಿಯಾದ ಹಗ್ಗಾಯನ ಮೂಲಕ ಈ ವಾಕ್ಯವನ್ನು ದಯಪಾಲಿಸಿದನು -
Kannada Bible (KNCL) BSI 2016
ಡೇರಿಯಸ್ ಚಕ್ರವರ್ತಿಯ ಆಳ್ವಿಕೆಯ ಎರಡನೇ ವರ್ಷದ ಒಂಬತ್ತನೇ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಪ್ರವಾದಿ ಹಗ್ಗಾಯನ ಮೂಲಕ ಈ ಸಂದೇಶವನ್ನು ಸರ್ವೇಶ್ವರ ದಯಪಾಲಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾರ್ಯಾವೆಷನ ಎರಡನೆಯ ವರ್ಷದ, ಒಂಬತ್ತನೆಯ ತಿಂಗಳಿನ, ಇಪ್ಪತ್ನಾಲ್ಕನೆಯ ದಿನದಲ್ಲಿ, ಯೆಹೋವ ದೇವರ ವಾಕ್ಯವು ಪ್ರವಾದಿಯಾದ ಹಗ್ಗಾಯನಿಗೆ ಬಂದಿತು: