Haggai 2:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಹಗ್ಗಾಯನು, “ಒಬ್ಬ ಮನುಷ್ಯನು ಸತ್ತ ಹೆಣವನ್ನು ಮುಟ್ಟಿದರೆ, ಅವನು ಅಪವಿತ್ರನಾಗುವನು. ಆ ಸ್ಥಿತಿಯಲ್ಲಿ ಅವನು ಮುಟ್ಟಿದ ಯಾವ ವಸ್ತುವೇ ಆಗಲಿ ಅಪವಿತ್ರವಾಗುವದೇ?” ಆಗ ಯಾಜಕರು, “ಹೌದು, ಆ ವಸ್ತುಗಳೂ ಅಪವಿತ್ರವಾಗುವವು” ಎಂದು ಉದ್ಗರಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮೇಲೆ ಹಗ್ಗಾಯನು, “ಹೆಣವನ್ನು ಮುಟ್ಟಿ ಅಶುದ್ಧನಾದವನು ಇವುಗಳಲ್ಲಿ ಯಾವುದನ್ನಾದರು ಸೋಕಿದರೆ ಅದು ಅಶುದ್ಧವಾಗುವುದೋ?” ಎಂದು ಕೇಳಿದ್ದಕ್ಕೆ ಯಾಜಕರು, “ಅಶುದ್ಧವೇ ಆಗುವುದು” ಎಂದು ಉತ್ತರಕೊಟ್ಟರು.
Kannada BSI Bible 2016
ಆಗ ಹಗ್ಗಾಯನು--ಆದರೆ ಹೆಣದಿಂದ ಅಶುದ್ಧನಾದವನು, ಇವುಗಳಲ್ಲಿ ಯಾವದನ್ನಾದರೂ ಮುಟ್ಟಿದರೆ, ಅಶುದ್ಧವಾಗುವದೋ ಅಂದನು. ಯಾಜ ಕರು ಉತ್ತರ ಕೊಟ್ಟು--ಅಶುದ್ದವಾಗುವದು ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಹಗ್ಗಾಯನು - ಹೆಣವನ್ನು ಮುಟ್ಟಿ ಅಶುದ್ಧನಾದವನು ಇವುಗಳಲ್ಲಿ ಯಾವದನ್ನಾದರೂ ಸೋಕಿದರೆ ಅದು ಅಶುದ್ಧವಾಗುವದೋ ಎಂದು ಕೇಳಿದ್ದಕ್ಕೆ ಯಾಜಕರು - ಅಶುದ್ಧವೇ ಆಗುವದು ಎಂದು ಉತ್ತರಕೊಟ್ಟರು.
Kannada Bible (KNCL) BSI 2016
ಆಗ ಹಗ್ಗಾಯನು, “ಹೆಣವನ್ನು ಮುಟ್ಟಿ ಅಶುದ್ಧನಾದವನು ಇವುಗಳಲ್ಲಿ ಯಾವುದನ್ನಾದರೂ ಸೋಕಿದರೆ ಅದು ಅಶುದ್ಧವಾಗುತ್ತದೋ” ಎಂದು ಕೇಳಿದನು. ಅದಕ್ಕೆ ಯಾಜಕರು: “ಖಂಡಿತವಾಗಿ ಅಶುದ್ಧವಾಗುತ್ತದೆ” ಎಂದು ಉತ್ತರಕೊಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಹಗ್ಗಾಯನು, “ಹೆಣದಿಂದ ಅಶುದ್ಧವಾದವನು, ಇವುಗಳಲ್ಲಿ ಯಾವುದನ್ನಾದರೂ ಮುಟ್ಟಿದರೆ, ಅಶುದ್ಧವಾಗುವುದೋ?” ಎಂದನು. ಯಾಜಕರು ಉತ್ತರವಾಗಿ, “ಹೌದು, ಅಶುದ್ಧವಾಗುವುದು,” ಎಂದರು.

Recommended Reading