Haggai 2:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಹಗ್ಗಾಯನು, “ನಿಮ್ಮ ದೇವರಾದ ಯೆಹೋವನು ಹೀಗೆನ್ನುತ್ತಾನೆ: ‘ಈ ಜನಾಂಗದ ಜನರ ವಿಷಯದಲ್ಲಿಯೂ ಅದು ಸತ್ಯವಾಗಿದೆ. ಅವರು ನನ್ನ ಮುಂದೆ ಪವಿತ್ರರಲ್ಲ. ಆದ್ದರಿಂದ ಅವರು ಯಾವ ವಸ್ತುವನ್ನಾದರೂ ಮುಟ್ಟಿದರೆ ಅದು ಅಶುದ್ಧವಾಗುವುದು ಮತ್ತು ಅವರು ಯಜ್ಞವೇದಿಕೆಯ ಮೇಲೆ ಅರ್ಪಿಸುವುದೆಲ್ಲಾ ಅಶುದ್ಧವಾಗಿರುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಹಗ್ಗಾಯನು ಮುಂದುವರಿಸುತ್ತಾ, ಜನರಿಗೆ ಹೀಗೆಂದನು, “ಯೆಹೋವನು ಇಂತೆನ್ನುತ್ತಾನೆ: ಇದರಂತೆಯೇ ಈ ಪ್ರಜೆ, ಈ ಜನಾಂಗ ಕೈಹಾಕುವ ಪ್ರತಿಯೊಂದು ಕೆಲಸ, ಇಲ್ಲಿಗೆ ತರುವ ಕಾಣಿಕೆ, ನೈವೇದ್ಯ, ಎಲ್ಲವೂ ನನಗೆ ಅಶುದ್ಧವಾಗಿಯೇ ಕಾಣುತ್ತಿದ್ದೆ.
Kannada BSI Bible 2016
ಆಗ ಹಗ್ಗಾಯನು ಉತ್ತರಕೊಟ್ಟು ಹೇಳಿದ್ದೇನಂದರೆ --ಈ ಜನರೂ ಈ ಜನಾಂಗವೂ ನನ್ನ ಮುಂದೆ ಹೀಗೆಯೇ ಇದ್ದಾರೆ ಎಂದು ಕರ್ತನು ಅನ್ನುತ್ತಾನೆ; ಅವರ ಕೈಕೆಲಸಗಳೆಲ್ಲಾ ಹೀಗೆಯೇ; ಅವರು ಅರ್ಪಿಸು ವಂಥದ್ದು ಅಶುದ್ಧವೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಹಗ್ಗಾಯನು ಆ ಪ್ರಸ್ತಾಪವೆತ್ತಿ ಹೀಗಂದನು - ಯೆಹೋವನು ಇಂತೆನ್ನುತ್ತಾನೆ - ಅದರಂತೆ ಈ ಪ್ರಜೆಯು, ಅದರಂತೆ ಈ ಜನಾಂಗವು, ಅದರಂತೆ ಇವರು ಕೈ ಹಾಕುವ ಎಲ್ಲಾ ಕೆಲಸವು, ಅಲ್ಲಿ ತಂದಿಡುವ ನ್ಯೆವೇದ್ಯವು ನನಗೆ ಅಶುದ್ಧವೇ ಸರಿ.
Kannada Bible (KNCL) BSI 2016
ಆಗ ಹಗ್ಗಾಯನು ಮುಂದುವರಿಸುತ್ತಾ, “ಸರ್ವೇಶ್ವರ ಇಂತೆನ್ನುತ್ತಾರೆ: ಇದರಂತೆಯೇ ಈ ಪ್ರಜೆ, ಈ ಜನಾಂಗ ಕೈಹಾಕುವ ಪ್ರತಿಯೊಂದು ಕೆಲಸ, ಇಲ್ಲಿಗೆ ತರುವ ಕಾಣಿಕೆ, ನೈವೇದ್ಯ, ಎಲ್ಲವೂ ನನಗೆ ಹೊಲೆಯಾಗಿಯೇ ಇದೆ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಹಗ್ಗಾಯನು ಮುಂದುವರಿಸಿ ಹೇಳಿದ್ದೇನೆಂದರೆ, “ಈ ಜನರೂ, ಈ ಜನಾಂಗವೂ ನನ್ನ ಮುಂದೆ ಹೀಗೆಯೇ ಇದ್ದಾರೆ ಎಂದು ಯೆಹೋವ ದೇವರು ಹೇಳುತ್ತಾರೆ. ಅವರು ಅರ್ಪಿಸುವಂಥಾದ್ದು ಅಶುದ್ಧವೇ.