Haggai 2:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾಕೆ ಹೀಗಾಯಿತು? ಯಾಕೆಂದರೆ ನಾನು ನಿಮ್ಮನ್ನು ಶಿಕ್ಷಿಸಿದೆನು. ನೀವು ನೆಟ್ಟ ಮರಗಳನ್ನು ನಾಶಮಾಡಲು ನಾನು ರೋಗವನ್ನು ಕಳುಹಿಸಿದೆನು. ನಿಮ್ಮ ಕೈಕೆಲಸವನ್ನು ಹಾಳುಮಾಡಲು ನಾನು ಆಲಿಕಲ್ಲಿನ ಮಳೆಯನ್ನು ಕಳುಹಿಸಿದೆನು. ನಾನು ಇಷ್ಟೆಲ್ಲಾ ಮಾಡಿದರೂ ನೀವು ಯಾರೂ ನನ್ನ ಬಳಿಗೆ ಬರಲಿಲ್ಲ.’ ಇದು ಯೆಹೋವನ ನುಡಿ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನಿಮ್ಮ ದುಡಿತದ ಫಲವನ್ನೆಲ್ಲಾ ಆನೆಕಲ್ಲು ಮಳೆಯಿಂದಲೂ, ಬಿಸಿಗಾಳಿಗೂ ಹಾಳುಮಾಡಿ ನಿಮ್ಮನ್ನು ಬಾಧಿಸಿದರೂ, ನೀವು ನನ್ನ ಕಡೆಗೆ ತಿರುಗಿಕೊಳ್ಳಲಿಲ್ಲ” ಇದು ಯೆಹೋವನ ನುಡಿ.
Kannada BSI Bible 2016
ನಾನು ನಿಮ್ಮನ್ನು ಸಸ್ಯ ನಾಶದಿಂದಲೂ ಬಿರುಗಾಳಿಯಿಂದಲೂ ಕಲ್ಮಳೆಯಿಂದಲೂ ನಿಮ್ಮ ಕೈ ದುಡಿತಗಳನ್ನೆಲ್ಲಾ ಹೊಡೆದೆನು; ಅದರೂ ನೀವು ನನ್ನ ಕಡೆಗೆ ತಿರುಗಲಿಲ್ಲವೆಂದು ಕರ್ತನು ಅನ್ನುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನಿಮ್ಮ ಕೈದುಡಿತದ ಫಲವನ್ನೆಲ್ಲಾ ಆನೆಕಲ್ಲು, ಕಾಡಿಗೆ, ಬಿಸಿಗಾಳಿ, ಇವುಗಳಿಂದ ಹಾಳು ಮಾಡಿ ನಿಮ್ಮನ್ನು ಬಾಧಿಸಿದರೂ ನೀವು ನನ್ನ ಕಡೆಗೆ ತಿರುಗಿಕೊಳ್ಳಲಿಲ್ಲ; ಇದು ಯೆಹೋವನ ನುಡಿ.
Kannada Bible (KNCL) BSI 2016
ನಾನು ನಿಮ್ಮ ದುಡಿಮೆಯ ಫಲವನ್ನು ಆನೆಕಲ್ಲು, ಬೂಷ್ಟು, ಬಿಸಿಗಾಳಿ - ಇವುಗಳಿಂದ ಹಾಳುಮಾಡಿ ನಿಮ್ಮನ್ನು ಬಾಧಿಸಿದೆನು. ಆದರೂ ನೀವು ನನ್ನ ಕಡೆಗೆ ತಿರುಗಿಕೊಳ್ಳಲಿಲ್ಲ, ಇದನ್ನು ನೆನಪಿನಲ್ಲಿಡಿ. ಇದು ಸರ್ವೇಶ್ವರನ ನುಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನಿಮ್ಮ ಕೈ ದುಡಿತಗಳನ್ನೆಲ್ಲಾ ಬೂಜಿನಿಂದಲೂ ಉರಿಗಾಳಿಯಿಂದಲೂ ಕಲ್ಮಳೆಯಿಂದಲೂ ಹಾಳುಮಾಡಿದೆನು. ಆದರೂ ನೀವು ನನ್ನ ಕಡೆಗೆ ತಿರುಗಲಿಲ್ಲವೆಂದು ಯೆಹೋವ ದೇವರು ಹೇಳುತ್ತಾರೆ.