Haggai 2:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಉಗ್ರಾಣದಲ್ಲಿ ಗೋಧಿಯ ಕಾಳು ಏನಾದರೂ ಉಳಿದಿದೆಯೋ? ಇಲ್ಲ! ದ್ರಾಕ್ಷಿಬಳ್ಳಿಗಳನ್ನು, ಅಂಜೂರದ ಮರಗಳನ್ನು, ದಾಳಿಂಬದ ಮರಗಳನ್ನು, ಆಲೀವ್ ಮರಗಳನ್ನು ನೋಡಿರಿ. ಅವು ಹಣ್ಣುಗಳನ್ನು ಬಿಡುತ್ತವೋ? ಇಲ್ಲ. ಆದರೆ ಈ ದಿನದಿಂದ ನಾನು ನಿಮ್ಮನ್ನು ಆಶೀರ್ವದಿಸುತ್ತೇನೆ!”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಣಜದಲ್ಲಿ ಕಾಳು ಇನ್ನು ಇದೆಯೋ? ದ್ರಾಕ್ಷಿ, ಅಂಜೂರ, ದಾಳಿಂಬೆ, ಒಲೀವ್ ಈ ಗಿಡಗಳು ಫಲಿಸಲಿಲ್ಲವಲ್ಲಾ. ಇದೇ ದಿನ ಮೊದಲುಗೊಂಡು ನಿಮ್ಮನ್ನು ಆಶೀರ್ವದಿಸುವೆನು.”
Kannada BSI Bible 2016
ಬೀಜವು ಇನ್ನು ಕಣಜದಲ್ಲಿ ಉಂಟೋ? ಮತ್ತು ದ್ರಾಕ್ಷೆ, ಅಂಜೂರ, ದಾಳಿಂಬರ, ಎಣ್ಣೆ ಮರಗಳು ಇನ್ನು ಫಲಿಸಲಿಲ್ಲ ವಲ್ಲಾ. ಈ ದಿನವು ಮೊದಲುಗೊಂಡು ನಿಮ್ಮನ್ನು ಆಶೀರ್ವದಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದ್ರಾಕ್ಷೆ, ಅಂಜೂರ, ದಾಳಿಂಬರ, ಒಲೀವ, ಈ ಗಿಡಗಳು ಫಲಿಸಲಿಲ್ಲವಲ್ಲಾ. ಇದೇ ದಿವಸ ಮೊದಲುಗೊಂಡು ನಿಮ್ಮನ್ನು ಆಶೀರ್ವದಿಸುವೆನು.
Kannada Bible (KNCL) BSI 2016
ಇನ್ನು ಮುಂದಕ್ಕೂ ಕಣಜದಲ್ಲಿ ಕಾಳಿಲ್ಲದೆ ಇರುವುದೋ? ದ್ರಾಕ್ಷೆ, ಅಂಜೂರ, ದಾಳಿಂಬೆ, ಓಲಿವ್ ಗಿಡಗಳು ಫಲಿಸದೆಹೋಗುವವೋ? ಇಲ್ಲ. ಈ ದಿನ ಮೊದಲ್ಗೊಂಡು ನಾನು ನಿಮ್ಮನ್ನು ಆಶೀರ್ವದಿಸುವೆನು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೀಜವು ಇನ್ನು ಕಣಜದಲ್ಲಿ ಉಂಟೋ? ದ್ರಾಕ್ಷಿ, ಅಂಜೂರ, ದಾಳಿಂಬೆ, ಎಣ್ಣೆಮರಗಳು ಇನ್ನೂ ಫಲಿಸಲಿಲ್ಲವಲ್ಲಾ. “ಈ ದಿನ ಮೊದಲುಗೊಂಡು ನಿಮ್ಮನ್ನು ಆಶೀರ್ವದಿಸುವೆನು,” ಎಂದರು.