Haggai 2:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನಿಮ್ಮಲ್ಲಿ ಎಷ್ಟು ಮಂದಿ ಹೊಸ ಆಲಯವನ್ನು ನೋಡುವಾಗ ಕೆಡವಲ್ಪಟ್ಟ ಮೊದಲನೇ ಆಲಯದ ಸೌಂದರ್ಯವನ್ನೂ ಗಾಂಭೀರ್ಯವನ್ನೂ ನೆನಪು ಮಾಡುತ್ತೀರಿ? ನಿಮ್ಮ ಆಲೋಚನೆಯೇನು? ಮೊದಲಿನ ಆಲಯದೊಡನೆ ಈ ಆಲಯವನ್ನು ಹೋಲಿಸಿದಾಗ ಇದು ಏನೂ ಅಲ್ಲವೆಂದು ತೋರುತ್ತದೋ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
‘ಈ ಆಲಯದ ಪೂರ್ವ ವೈಭವವನ್ನು ನೋಡಿದವರು, ನಿಮ್ಮಲ್ಲಿ ಎಷ್ಟು ಮಂದಿ ಉಳಿದಿದ್ದೀರಿ? ಇದರ ಈಗಿನ ಸ್ಥಿತಿಯು ನಿಮಗೆ ಹೇಗೆ ತೋರುತ್ತದೆ? ನಿಮ್ಮ ದೃಷ್ಟಿಗೆ ಏನೂ ಇಲ್ಲವಾಗಿ ತೋರುತ್ತಿದೆಯಲ್ಲವೇ?’
Kannada BSI Bible 2016
ಈ ಆಲಯವನ್ನು ಅದರ ಪೂರ್ವದ ಮಹಿಮೆಯಲ್ಲಿ ನೋಡಿದವರೊಳಗೆ ಉಳಿದ ವರು ನಿಮ್ಮಲ್ಲಿ ಯಾರು? ಈಗ ಅದನ್ನು ಹೇಗೆ ನೋಡು ತ್ತೀರಿ? ಇದು ನಿಮ್ಮ ಕಣ್ಣುಗಳಿಗೆ ಅದರ ಹೋಲಿಕೆಯು ಏನೂ ಇಲ್ಲದ ಹಾಗೆ ತೋರು ತ್ತದಲ್ಲವೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಆಲಯದ ಪೂರ್ವವೈಭವವನ್ನು ನೋಡಿದವರು ನಿಮ್ಮಲ್ಲಿ ಎಷ್ಟು ಮಂದಿ ಉಳಿದಿದ್ದೀರಿ? ಇದರ ಈಗಿನ ಸ್ಥಿತಿಯು ನಿಮಗೆ ಹೇಗೆ ತೋರುತ್ತದೆ? ನಿಮ್ಮ ದೃಷ್ಟಿಗೆ ಏನೂ ಇಲ್ಲದಾಗಿ ಕಾಣಿಸುತ್ತದಲ್ಲವೆ.
Kannada Bible (KNCL) BSI 2016
“ಈ ದೇವಾಲಯದ ಪೂರ್ವ ವೈಭವವನ್ನು ನೋಡಿದವರು ನಿಮ್ಮಲ್ಲಿ ಎಷ್ಟುಮಂದಿ ಉಳಿದಿದ್ದೀರಿ? ಇದರ ಈಗಿನ ಸ್ಥಿತಿ ನಿಮಗೆ ಹೇಗೆ ತೋರುತ್ತದೆ? ನಿಮ್ಮ ದೃಷ್ಟಿಗೆ ಏನೂ ಇಲ್ಲದಂತೆ ಕಾಣಿಸುತ್ತದಲ್ಲವೇ? ಸರ್ವೇಶ್ವರ ಆದ ನಾನು ಹೇಳುವುದನ್ನು ಕೇಳಿ:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಆಲಯದ ಅದರ ಪೂರ್ವದ ಮಹಿಮೆಯನ್ನು ನೋಡಿದವರೊಳಗೆ ಉಳಿದವನು ನಿಮ್ಮಲ್ಲಿ ಯಾರು ಇದ್ದಾರೆ? ಈಗ ಅದು ಹೇಗೆ ಕಾಣುತ್ತದೆ? ಇದು ನಿಮ್ಮ ದೃಷ್ಟಿಗೆ ಏನೂ ಇಲ್ಲದ ಹಾಗೆ ತೋರುತ್ತದಲ್ಲವೋ?