Haggai 2:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಹೇಳುವುದೇನೆಂದರೆ, “ನೀವು ಈಜಿಪ್ಟ್ ದೇಶವನ್ನು ಬಿಟ್ಟಾಗ ನಾನು ನಿಮ್ಮೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡೆನು. ನಾನು ಆ ವಾಗ್ದಾನವನ್ನು ನೆರವೇರಿಸಿದ್ದೇನೆ! ನನ್ನ ಆತ್ಮವು ನಿಮ್ಮೊಂದಿಗಿದೆ. ಆದ್ದರಿಂದ ಭಯಪಡಬೇಡಿ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
‘ನೀವು ಐಗುಪ್ತದಿಂದ ಪಾರಾಗಿ ಬಂದಾಗ, ನಾನು ನಿಮಗೆ ವಾಗ್ದಾನವಾಗಿ ಕೊಟ್ಟ ಮಾತನ್ನು ನೆರವೇರಿಸುವೆನು; ನನ್ನ ಆತ್ಮನು ನಿಮ್ಮ ಮಧ್ಯದಲ್ಲಿ ನೆಲೆಗೊಂಡಿರುವನು; ಹೆದರಬೇಡಿರಿ.’
Kannada BSI Bible 2016
ನೀವು ಐಗುಪ್ತದೊಳ ಗಿಂದ ಹೊರಗೆ ಬಂದಾಗ ನಾನು ನಿಮ್ಮ ಸಂಗಡ ಒಡಂಬಡಿಕೆ ಮಾಡಿದ ವಾಕ್ಯದ ಪ್ರಕಾರ ನನ್ನ ಆತ್ಮವು ನಿಮ್ಮ ಮಧ್ಯದಲ್ಲಿ ನಿಲ್ಲುತ್ತದೆ; ನೀವು ಭಯಪಡ ಬೇಡಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಐಗುಪ್ತದಿಂದ ಪಾರಾಗಿ ಬಂದಾಗ ನಾನು ನಿಮಗೆ ಪ್ರಮಾಣವಾಗಿ ಕೊಟ್ಟ ಮಾತನ್ನು [ನೆರವೇರಿಸುವೆನು]; ನನ್ನ ಆತ್ಮನು ನಿಮ್ಮ ಮಧ್ಯದಲ್ಲಿ ನೆಲೆಗೊಂಡಿರುವನು; ಹೆದರಬೇಡಿರಿ,
Kannada Bible (KNCL) BSI 2016
ನೀವು ಈಜಿಪ್ಟ್ ದೇಶದಿಂದ ಹೊರಟುಬಂದಾಗ ನಾನು ನಿಮಗೆ ಪ್ರಮಾಣವಾಗಿ ಕೊಟ್ಟ ಮಾತನ್ನು ನೆರವೇರಿಸುವೆನು. ನನ್ನ ಆತ್ಮವು ನಿಮ್ಮಲ್ಲಿ ನೆಲೆಗೊಂಡಿದೆ; ಭಯಪಡದಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಈಜಿಪ್ಟಿನೊಳಗಿನಿಂದ ಹೊರಗೆ ಬಂದಾಗ, ನಾನು ನಿಮ್ಮ ಸಂಗಡ ಒಡಂಬಡಿಕೆ ಮಾಡಿದ ವಾಕ್ಯದ ಪ್ರಕಾರ, ನನ್ನ ಆತ್ಮವು ನಿಮ್ಮಲ್ಲಿ ನೆಲೆಗೊಂಡಿರುವುದು. ನೀವು ಭಯಪಡಬೇಡಿರಿ.